ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯೊಬ್ಬಳಿಗೆ ಕೊರೊನಾ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ ಎನ್ನಲಾಗಿದೆ.
ಈಗಾಗಲೇ ಎರಡು ವಿಷಯಗಳ ಪರೀಕ್ಷೆಯನ್ನು ಬರೆದಿರುವ ವಿದ್ಯಾರ್ಥಿನಿಗೆ ಪರೀಕ್ಷೆಗೆ ಅವಕಾಶ ನಿರಾಕರಿಸಿದ್ದು, ಪೂರಕ ಪರೀಕ್ಷೆಯಲ್ಲಿ ಅವಕಾಶ ನೀಡಲಾಗುವುದು.
ವಿದ್ಯಾರ್ಥಿನಿಯ ತಂದೆಗೆ ಶನಿವಾರ ಸೋಂಕು ತಗುಲಿರುವುದು ಗೊತ್ತಾಗಿದ್ದು, ಹೀಗಾಗಿ ವಿದ್ಯಾರ್ಥಿನಿಗೆ ಮುಂದಿನ ವಿಷಯದ ಪರೀಕ್ಷೆಗಳನ್ನು ಬರೆಯಲು ಅವಕಾಶ ನೀಡುವುದಿಲ್ಲ. ವಿದ್ಯಾರ್ಥಿನಿಗೆ ಕೊರೊನಾ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದ್ದು, ವರದಿ ನಿರೀಕ್ಷೆಯಲ್ಲಿದ್ದಾರೆ ಎನ್ನಲಾಗಿದೆ.