alex Certify ಕ್ವಾರಂಟೈನ್ ಮುಗಿತಿದ್ದಂತೆ ಪ್ರಿಯಕರನೊಂದಿಗೆ ವಿವಾಹಿತೆ ಪರಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ವಾರಂಟೈನ್ ಮುಗಿತಿದ್ದಂತೆ ಪ್ರಿಯಕರನೊಂದಿಗೆ ವಿವಾಹಿತೆ ಪರಾರಿ

ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದಲ್ಲಿ ಹೋಮ್ ಕ್ವಾರಂಟೈನ್ ಮುಗಿಸಿದ ವಿವಾಹಿತೆ ಪ್ರಿಯಕರನೊಂದಿಗೆ ಪರಾರಿಯಾಗಿದ್ದಾರೆ. ಈ ಕುರಿತಾಗಿ ಅಜೆಕಾರು ಠಾಣೆಗೆ ದೂರು ನೀಡಲಾಗಿದೆ.

ಕೈಕಂಬದ 28 ವರ್ಷದ ಗೃಹಿಣಿಗೆ 8 ವರ್ಷಗಳ ಹಿಂದೆ ಮದುವೆಯಾಗಿ ದಂಪತಿ ಪುಣೆಯಲ್ಲಿ ನೆಲೆಸಿದ್ದರು. ಕೆಲವು ತಿಂಗಳ ಹಿಂದೆ ಕೌಟುಂಬಿಕ ಸಮಸ್ಯೆ ಕಾರಣದಿಂದ ಮಗಳೊಂದಿಗೆ ಊರಿಗೆ ಬಂದ ಮಹಿಳೆ ಪೋಷಕರೊಂದಿಗೆ ವಾಸವಾಗಿದ್ದಾರೆ.

ಇದೇ ವೇಳೆ ಮಂಗಳೂರಿನಲ್ಲಿ ನಡೆದ ಸಂಬಂಧಿಕರೊಬ್ಬರ ಮದುವೆಗೆ ಹೋಗಿ ಊರಿಗೆ ಬಂದಿದ್ದ ಹಿನ್ನೆಲೆಯಲ್ಲಿ ಮಹಿಳೆ ಮತ್ತು ಆಕೆಯ ತಾಯಿ ಹಾಗೂ ಸಹೋದರನನ್ನು ಹೋಮ್ ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ. ಮಂಗಳೂರಿನಲ್ಲಿ ಕ್ವಾರಂಟೈನ್ ನಲ್ಲಿದ್ದ ಮಹಿಳೆಯ ತಂದೆ ಕ್ವಾರಂಟೈನ್ ಮುಗಿಸಿ ಬಂದ ಬಳಿಕ ಮನೆಯಲ್ಲಿದ್ದ ಮಗಳು ಅನೇಕ ವರ್ಷಗಳ ಹಿಂದೆ ಪ್ರೀತಿಸಿದ್ದ ಮೂಡಬಿದರೆಯ ವಿವಾಹಿತನೊಂದಿಗೆ ನಾಪತ್ತೆಯಾಗಿರುವುದು ಗೊತ್ತಾಗಿದೆ. ಈ ಸಂಬಂಧ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...