ನವದೆಹಲಿ: ರಾಜ್ಯ ರಾಜಧಾನಿ ಬೆಂಗಳೂರಿನ ಸಂಚಾರ ದಟ್ಟಣೆ ತಗ್ಗಿಸಲು ಉಪನಗರ ರೈಲು ಯೋಜನೆಗೆ ಅಗತ್ಯವಿರುವ ಅನುದಾನ ಒದಗಿಸಲು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಸಬರ್ಬನ್ ರೈಲಿಗೆ ಕೇಂದ್ರ ಸಂಪುಟ ಅಸ್ತು ಎಂದಿದ್ದು, ಯೋಜನೆಯ ಪರಿಷ್ಕೃತ ಡಿಪಿಆರ್ ಗೆ ಅನುಮೋದನೆ ನೀಡಲಾಗಿದೆ. ಕೇಂದ್ರ ಸರ್ಕಾರ 2020 -21 ನೇ ಸಾಲಿನ ಬಜೆಟ್ ನಲ್ಲಿ ಯೋಜನೆ ಅನುಷ್ಠಾನದ ಬಗ್ಗೆ ಘೋಷಣೆ ಮಾಡಿದ್ದು ರೈಲ್ವೆ ಮಂಡಳಿ ಪರಿಷ್ಕೃತ ಡಿಪಿಆರ್ ಒಪ್ಪಿದೆ. ಕೇಂದ್ರ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಅನುಮೋದನೆ ಬಾಕಿ ಉಳಿದಿದ್ದು, ಈಗ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಉಪನಗರ ರೈಲು ಯೋಜನೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.
19 ಸಾವಿರ ಕೋಟಿ ರೂಪಾಯಿ ಒದಗಿಸಲು ಸಂಪುಟ ಅನುಮೋದನೆ ನೀಡಿದ್ದು, 2026 ಕ್ಕೆ ಯೋಜನೆ ಕಾಮಗಾರಿ ಪೂರ್ಣಗೊಳ್ಳಲಿದೆ. 2027 ರಿಂದ ಉಪನಗರ ರೈಲು ಸಂಚಾರ ಆರಂಭವಾಗಲಿದೆ.