alex Certify BPL ಕಾರ್ಡ್ ಹೊಂದಿದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BPL ಕಾರ್ಡ್ ಹೊಂದಿದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಕಲಬುರಗಿ: ಮೈಸೂರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ವಿವಿಧ ಕೋರ್ಸುಗಳಿಗೆ ಪ್ರವೇಶಾತಿ ಪ್ರಾರಂಭವಾಗಿದೆ.

2020 -21 ನೇ ಶೈಕ್ಷಣಿಕ ವರ್ಷಕ್ಕೆ ಪ್ರಥಮ ಬಿಎ, ಬಿಕಾಂ, ಎಂಎ(ಕನ್ನಡ, ಇಂಗ್ಲಿಷ್, ಹಿಂದಿ, ಉರ್ದು, ಇತಿಹಾಸ, ಪ್ರಾಚೀನ ಇತಿಹಾಸ, ಪುರಾತತ್ವ ಅಧ್ಯಯನ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜಶಾಸ್ತ್ರ, ಸಾರ್ವಜನಿಕ ಆಡಳಿತ, ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ), ಎಂಎಸ್ಸಿ ಮೊದಲಾದ ವಿಷಯಗಳಿಗೆ ಪ್ರವೇಶ ಪಡೆಯಬಹುದಾಗಿದೆ.

ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ಅಭ್ಯರ್ಥಿಗಳಿಗೆ ಬೋಧನಾ ಶುಲ್ಕದಲ್ಲಿ ಶೇಕಡ 25 ರಷ್ಟು ರಿಯಾಯಿತಿ ನೀಡಲಾಗುವುದು. ದಂಡವಿಲ್ಲದೆ ಪ್ರವೇಶ ಪಡೆಯಲು 2020 ರ ಅಕ್ಟೋಬರ್ 10 ಕೊನೆಯ ದಿನವಾಗಿದೆ. ಕರ್ನಾಟಕ ರಾಜ್ಯ ಮುಕ್ತ ವಿವಿ ಶೈಕ್ಷಣಿಕ ವರ್ಷಕ್ಕೆ ಪ್ರವೇಶ ಪಡೆಯಲು ಇಚ್ಛಿಸುವ ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08472 265868, ವೆಬ್ ಸೈಟ್ www.ksoumysuru.ac.in ಗಮನಿಸಬಹುದಾಗಿದೆ ಎಂದು ಕಲಬುರಗಿ ಪ್ರಾದೇಶಿಕ ಕೇಂದ್ರದ ನಿರ್ದೇಶಕ ಸಂಗಮೇಶ ಹಿರೇಮಠ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...