ಬೆಂಗಳೂರು: ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಸಂಬಂಧಿ ನವೀನ್, ಫೇಸ್ಬುಕ್ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ಅವರ ತಲೆ ತಂದವನಿಗೆ 51 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿಯನ್ನು ಉತ್ತರಪ್ರದೇಶ ಪೊಲೀಸರು ಬಂಧಿಸಿದ್ದಾರೆ.
ಸಮಾಜವಾದಿ ಪಕ್ಷದ ಮಾಜಿ ಮುಖಂಡ ಶಾಜೇಬ್ ರಿಜ್ವಿ ಬಂಧಿತ ಆರೋಪಿ. ನವೀನ್ ತಲೆ ತಂದವರಿಗೆ 51 ಲಕ್ಷ ರೂಪಾಯಿ ನೀಡುವುದಾಗಿ ವಿಡಿಯೋ ಬಿಡುಗಡೆ ಮಾಡಿದ್ದ ರಿಜ್ವಿ ಬಹುಮಾನ ನೀಡಲು ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸುತ್ತಿದ್ದ.
ಅಲ್ಲದೇ ತನ್ನ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ಪೊಲೀಸರಿಂದ ತಪ್ಪಿಸಿಕೊಂಡಿದ್ದ. ಉತ್ತರಪ್ರದೇಶ ಪೊಲೀಸರು ಕಾರ್ಯಾಚರಣೆ ನಡೆಸಿ ಮೀರತ್ ನಲ್ಲಿ ಆರೋಪಿ ರಿಜ್ವಿಯನ್ನು ಬಂಧಿಸಿದ್ದಾರೆ.