ಬೆಂಗಳೂರು: ರಾಜ್ಯಾದ್ಯಂತ ವಸತಿ ಯೋಜನೆ ಫಲಾನುಭವಿಗಳಿಗೆ ನಿವೇಶನ ಹಕ್ಕು ನೀಡಲು ತೀರ್ಮಾನಿಸಲಾಗಿದೆ.
ವಸತಿ ಸಚಿವ ವಿ. ಸೋಮಣ್ಣ ಕರ್ನಾಟಕ ಗೃಹ ಮಂಡಳಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ವಿವಿಧ ವಸತಿ ಯೋಜನೆ ಫಲಾನುಭವಿಗಳಿಗೆ ನಿವೇಶನ ಹಕ್ಕು ನೀಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.
15 ವರ್ಷಗಳ ಕಾಲ ಪರಭಾರೆ ಮಾಡುವಂತಿಲ್ಲ ಎಂದು ಷರತ್ತು ವಿಧಿಸಲಾಗುತ್ತದೆ. ಫಲಾನುಭವಿಗಳಿಗೆ ಹಕ್ಕು ಇಲ್ಲದ ಕಾರಣಕ್ಕೆ ಬ್ಯಾಂಕ್ ಸಾಲ ಸಿಗುತ್ತಿಲ್ಲ. ಹಾಗಾಗಿ ನಿವೇಶನದ ಹಕ್ಕು ನೀಡಲಾಗುವುದು. 15 ವರ್ಷಗಳ ಕಾಲ ಪರಭಾರೆ ಮಾಡುವಂತಿಲ್ಲ ಎಂದು ಷರತ್ತು ವಿಧಿಸಲಾಗುವುದು ಎಂದು ಹೇಳಿದ್ದಾರೆ.