alex Certify ಮನೆ ಹೊಂದುವ ಕನಸು ಕಂಡವರಿಗೆ ಸಚಿವರಿಂದ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆ ಹೊಂದುವ ಕನಸು ಕಂಡವರಿಗೆ ಸಚಿವರಿಂದ ಗುಡ್ ನ್ಯೂಸ್

ದಾವಣಗೆರೆ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಶಯದಂತೆ ಸೂರಿಲ್ಲದವರಿಗೆ 2022ರೊಳಗಾಗಿ ಪ್ರತಿಯೊಬ್ಬರಿಗೂ ಒಂದು ಸೂರು ಒದಗಿಸುವ ಚಿಂತನೆಗೆ ಸುಮಾರು 10 ಲಕ್ಷ ಮನೆಗಳನ್ನು ಇನ್ನೂ ಒಂದೂವರೆಯಿಂದ ಎರಡು ವರ್ಷಗಳಲ್ಲಿ ಮುಗಿಸಲು ಕ್ರಿಯಾ ಯೋಜನೆ ಮಾಡಿ ಕೆಲಸ ಕೂಡ ಪ್ರಾರಂಭಿಸಲಾಗಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.

ಸೋಮವಾರ ಹರಿಹರ ನಗರದ ಶೋರಾಪುರ ಗ್ರಾಮದಲ್ಲಿ ಗೃಹ ಮಂಡಳಿಯ ವಶದಲ್ಲಿರುವ ಜಮೀನು ಸ್ಥಳ ಪರಿವೀಕ್ಷಣೆ ನಡೆಸಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಫಲಾನುಭವಿಗಳ ಆಯ್ಕೆ ಪಾರದರ್ಶಕವಾಗಿ ಮಾಡಿ ಬಡವರಿಗೆ ಮನೆ ಕೊಡಲು ಮುಂದಾಗುತ್ತೇವೆ. ಇದರಲ್ಲಿ ಯಾವುದೇ ರಾಜಕಾರಣ ಇಲ್ಲ. ಪ್ರತಿಯೊಬ್ಬ ಬಡವರಿಗೂ ಮನೆ ಒದಗಿಸಬೇಕು ಎಂಬುದು ನಮ್ಮ ಮುಖ್ಯ ಉದ್ದೇಶವಾಗಿದ್ದು, ಪಾರದರ್ಶಕವಾಗಿ ಕೆಲಸ ಮಾಡಿಕೊಂಡು ಬರಲಾಗುತ್ತಿದೆ. ಅದಕ್ಕಾಗಿ 4,535 ಎಕರೆ ಜಾಗವನ್ನು ರಾಜೀವ ಗಾಂಧಿ ವಸತಿ ನಿಗಮಕ್ಕೆ ಹಸ್ತಾಂತರ ಮಾಡಿಕೊಂಡಿದ್ದು,. 1.20 ಲಕ್ಷ ಸೈಟ್‍ಗಳನ್ನು ನಾಲ್ಕೈದು ತಿಂಗಳಲ್ಲಿ ಬೇಕಾದಂದಹ ಮೂಲಭೂತ ಸೌಕರ್ಯ ಒದಗಿಸಿ ಹಂಚುವ ಕೆಲಸ ಮಾಡಲಾಗುವುದು. 30 ವರ್ಷದಲ್ಲಿ ಇಡೀ ರಾಜ್ಯದಲ್ಲಿ 3 ಲಕ್ಷ ಸೈಟ್ ಕೊಡಲಾಗಿದೆ. ಆದರೆ 1.20 ಲಕ್ಷ ಸೈಟ್‍ಗಳನ್ನು ಇನ್ನು ಐದರಿಂದ ಆರು ತಿಂಗಳಲ್ಲಿ ಬಡವರಿಗೆ ನೀಡಲಿದ್ದೇವೆ ಎಂದು ಹೇಳಿದ್ದಾರೆ.

ಈ ಬಾರಿ ರಾಜೀವ್‍ಗಾಂಧಿ ಯೋಜನೆಯಿಂದ 69 ಸಾವಿರ ಮನೆಗಳನ್ನು ಕಟ್ಟಲು ರಾಜ್ಯದ ಮಹಾನಗರಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬೆಂಗಳೂರು ಹಾಗೂ ಮೈಸೂರು ಹೊರತುಪಡಿಸಿ ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿದೆ. ಈಗಾಗಲೇ ಸಂಡೂರಿನಲ್ಲಿ 2 ಸಾವಿರ ಮನೆ, ನಿಪ್ಪಾಣಿಯಲ್ಲಿ 1,600 ಮನೆ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ 3 ಸಾವಿರ ಮನೆ ಸೇರಿದಂತೆ ಅನೇಕ ಕಡೆ ಕೆಲಸ ಶುರು ಮಾಡಲಾಗಿದೆ ಎಂದು ಹೇಳಿದ್ದಾರೆ.

ಅವಾಸ್ ಯೋಜನೆಯಲ್ಲಿ ಮನೆ ಕಟ್ಟಿದವರಿಗೆ ಹಣವನ್ನು ಹಂತ ಹಂತವಾಗಿ ಬಿಡುಗಡೆ ಮಾಡಲಾಗುವುದು. ಈಗ ಸದ್ಯದ ಪರಿಸ್ಥಿತಿಯಲ್ಲಿ ಗ್ರಾಮೀಣ ಭಾಗದಲ್ಲಿ 5.40 ಲಕ್ಷ ಹಾಗೂ ಪಟ್ಟಣ ಪ್ರದೇಶದಲ್ಲಿ 4.60 ಲಕ್ಷ ಮನೆಗಳಿಗೆ ಹೊರತುಪಡಿಸಿ ಬೇರೆ ಮನೆಗಳಿಗೆ ಹಣ ಬಿಡುಗಡೆ ಮಾಡಲಾಗುವುದಿಲ್ಲ. ಇನ್ನುಳಿದಂತೆ ಒಂದೂವರೆ ವರ್ಷದಲ್ಲಿ ಫಲಾನುಭವಿಗಳಿಗೆ ಹಂತ ಹಂತವಾಗಿ ಹಣ ಬಿಡುಗಡೆ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...