alex Certify ಮನೆ ಹೊಂದುವ ಕನಸು ಕಂಡಿದ್ದ ಬಡವರಿಗೆ ಸಚಿವರಿಂದ ಸಿಹಿ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆ ಹೊಂದುವ ಕನಸು ಕಂಡಿದ್ದ ಬಡವರಿಗೆ ಸಚಿವರಿಂದ ಸಿಹಿ ಸುದ್ದಿ

ಬೆಂಗಳೂರು: ಬಡವರು ಬಡವರಾಗಿ ಉಳಿಯಬಾರದು. ಎಲ್ಲರಿಗೂ ಸಮಾನ ಬದುಕು ಕಟ್ಟಿಕೊಡುವ ನಿಟ್ಟಿನಲ್ಲಿ ನಗರದ ಪ್ರತಿಯೊಂದು ಸ್ಲಮ್‍ನಲ್ಲೂ ಮನೆಗಳನ್ನು ನಿರ್ಮಿಸಿಕೊಡುವುದು ನಮ್ಮ ಆದ್ಯ ಕರ್ತವ್ಯ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

ಇಂದು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ವಾರ್ಡ್ ಸಂಖ್ಯೆ 105 ಅಗ್ರಹಾರ ದಾಸರಹಳ್ಳಿಯಲ್ಲಿ ವಿವಿಧ ಕಾಮಗಾರಿಗಳ ಪರಿವೀಕ್ಷಣೆ ನಡೆಸಿ ಅವರು ಮಾತನಾಡಿದರು.

ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಅಗ್ರಹಾರ ದಾಸರಹಳ್ಳಿಯಲ್ಲಿ ನಡೆಯುತ್ತಿರುವ ಒಟ್ಟು ಸುಮಾರು ರೂ. 5 ಕೋಟಿ ವೆಚ್ಚದ ಕಾಮಗಾರಿಗಳಾದ ತೋಟಗಾರಿಕೆ ಕಾಮಗಾರಿ, ಚರಂಡಿ ಕಾಮಗಾರಿ, ಸೋಲಾರ್ ಹೀಟರ್, ಆರೋಗ್ಯ ಕೇಂದ್ರ, ಕೆ.ಹೆಚ್.ಬಿ. ಕಾಲೋನಿ ಅಭಿವೃದ್ದಿ, 150 ಮನೆಗಳ ನಿರ್ಮಾಣ, ಬಸವನ ಪಾರ್ಕ್, ಇಂಗು ಗುಂಡಿ,  ಕಾಂಕ್ರಿಟ್ ರಸ್ತೆ, ಹಾಗೂ  ಕ್ರೀಡಾ ಸಂಕೀರ್ಣ ಸೇರಿದಂತೆ ವಿವಿಧ ಕಾಮಗಾರಿಗಳ ಪ್ರಗತಿಯನ್ನು ವೀಕ್ಷಿಸಿದ್ದಾರೆ.

ಅಗ್ರಹಾರ ದಾಸರಹಳ್ಳಿ ಕೆ.ಹೆಚ್..ಬಿ. ಕಾಲೋನಿಯಲ್ಲಿ 30 ಜನರಿಗೆ ಸೋಲಾರ್ ಹೀಟರ್ ಉಪಕರಣ ವಿತರಣೆ ಮಾಡಿ ಮುಂಬರುವ ದಿನಗಳಲ್ಲಿ ಎಲ್ಲರಿಗೂ ಸೋಲಾರ್ ವ್ಯವಸ್ಥೆಯನ್ನು ಮಾಡಲಾಗುವುದು ಹಾಗೂ ಮನೆಗಳನ್ನು ನಿರ್ಮಾಣ ಮಾಡಲು ಸ್ಥಳವನ್ನು ಪರಿಶೀಲಿಸಿರುವ ಜಾಗದಲ್ಲಿ 140 ಕ್ಕೂ ಹೆಚ್ಚು ಮನೆಗಳು ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ವಾರ್ಡ್ ಸಂಖ್ಯೆ 105 ಅಗ್ರಹಾರ ದಾಸರಹಳ್ಳಿಯ ಸದಸ್ಯರಾದ ಶಿಲ್ಪ ಶ್ರೀಧರ್ ಕಾಮಗಾರಿಗಳನ್ನು ಅಚ್ಚುಕಟ್ಟಾಗಿ ನಡೆಸಿಕೊಂಡು ಬರುತ್ತಿದ್ದಾರೆ. ಕೆಲವು ಕಾಮಗಾರಿಗಳು ಸಂಪೂರ್ಣಗೊಂಡಿದ್ದು, ಹೊಸದಾಗಿ ಮತ್ತಷ್ಟು ಕಾಮಗಾರಿಗಳನ್ನು ಪ್ರಾರಂಭಿಸಿದ್ದೇವೆ ಎಂದು ತಿಳಿಸಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಬನಶಂಕರಿಯ ದೇವಸ್ಥಾನದ ಹತ್ತಿರ ಚರಂಡಿ ಹಾಗೂ ಕಾಂಕ್ರಿಟ್ ರಸ್ತೆಯ ಗುದ್ದಲಿ ಪೂಜೆ ನೆರವೇರಿಸಿದ ಸಚಿವರು ಕೆ.ಹೆಚ್.ಬಿ ಕಾಲೋನಿಯ ಸ್ಲಮ್‍ನಲ್ಲಿ ವಾಸ ಮಾಡುತ್ತಿರುವ 15 ಫಲಾನುಭವಿಗಳಿಗೆ ತಲಾ 15,000 ರೂ. ಚೆಕ್ ವಿತರಿಸಿದರು. ಕಾರ್ಯಕ್ರಮದಲ್ಲಿ ಬಿಬಿಎಂಪಿ ಸದಸ್ಯರು, ಇಲಾಖಾ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...