alex Certify ಆಗಸ್ಟ್ 15 ರ ವೇಳೆಗೆ ಕೊರೋನಾ ಲಸಿಕೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಗಸ್ಟ್ 15 ರ ವೇಳೆಗೆ ಕೊರೋನಾ ಲಸಿಕೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ

ಹುಬ್ಬಳ್ಳಿ: ಕೊರೊನಾ ಸೋಂಕು ತಡೆಯಲು ಆಗಸ್ಟ್ 15ರ ವೇಳೆಗೆ ಲಸಿಕೆ ಬಿಡುಗಡೆ ಮಾಡಲಾಗುವುದು ಎನ್ನುವ ಸುದ್ದಿ ಹರಿದಾಡಿದ್ದು, ಮುಂದಿನ ವರ್ಷದ ವೇಳೆಗೆ ಲಸಿಕೆ ಬಿಡುಗಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಕೇಂದ್ರ ಸರ್ಕಾರ ಆಗಸ್ಟ್ 15 ರ ವೇಳೆಗೆ ಕೊರೋನಾ ತಡೆ ಲಸಿಕೆ ಬಿಡುಗಡೆ ಮಾಡಲಿದೆ ಎನ್ನುವ ಸುದ್ದಿ ಅಧಿಕೃತವಲ್ಲ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಈ ಕುರಿತು ಮಾತನಾಡಿ, ಕೊರೊನಾ ಸೋಂಕು ತಡೆಯುವ ಲಸಿಕೆ ಕೇಂದ್ರ ಸರ್ಕಾರ ಆಗಸ್ಟ್ 15ರ ವೇಳೆಗೆ ಬಿಡುಗಡೆ ಮಾಡುತ್ತದೆ ಎನ್ನುವ ಸುದ್ದಿ ಅಧಿಕೃತವಲ್ಲ. ಈ ಕುರಿತಾಗಿ ಯಾವ ತೀರ್ಮಾನವಾಗಿಲ್ಲ ಎಂದು ಹೇಳಿದ್ದಾರೆ.

ಕೊರೋನಾ ತಡೆಗೆ ಲಸಿಕೆ ಕಂಡು ಹಿಡಿಯಲು ಸಂಶೋಧನಾ ಸಂಸ್ಥೆಗಳು ಪ್ರಯತ್ನ ಮುಂದುವರೆಸಿವೆ. ಮಾನವ ಕ್ಲಿನಿಕಲ್ ಪ್ರಯೋಗದ ನಂತರ ಮುಂದಿನ ವರ್ಷದ ವೇಳೆಗೆ ಲಸಿಕೆ ಬಿಡುಗಡೆಯಾಗಬಹುದು ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...