ಬೆಂಗಳೂರು: ರಾಜ್ಯದ ಹಿರಿಯ ಮಹಿಳಾ ಐಪಿಎಸ್ ಅಧಿಕಾರಿಯೊಬ್ಬರು ಪತಿ ಹಾಗೂ ಕುಟುಂಬ ಸದಸ್ಯರ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ಮಾಡಿದ್ದು, ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ತಮ್ಮ ಪತಿ ಐಎಫ್ ಎಸ್ ಅಧಿಕಾರಿ ನಿತಿನ್ ಸುಭಾಷ್ ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ದೂರು ದಾಖಲಿಸಿದ್ದಾರೆ. ನಿತಿನ್ ಸೇರಿದಂತೆ 7 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ರಕ್ತದಲ್ಲಿ ಪ್ರಧಾನಿ ಮೋದಿಗೆ ಪತ್ರ ಬರೆದ ರೈತರು
2011ರಲ್ಲಿ ನಿತಿನ್ ಜೊತೆ ವಿವಾಹವಾಗಿದ್ದ ವರ್ತಿಕಾ ತನಗೆ ಪತಿ ವರದಕ್ಷಿಣೆಗಾಗಿ ಪೀಡಿಸುತ್ತಿದ್ದು, ದೈಹಿಕ ದೌರ್ಜನ್ಯವನ್ನೂ ಎಸಗಿದ್ದಾರೆ. ವರದಕ್ಷಿಣೆ ನೀಡದಿದ್ದರೆ ವಿಚ್ಛೇಧನ ಕೊಡುವುದಾಗಿ ಹೆದರಿಸುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಐಪಿಎಸ್ ಅಧಿಕಾರಿಗೂ ವರದಕ್ಷಿಣೆ ಕಿರುಕುಳ ನೀಡಿದರೆ ಇನ್ನು ಸಾಮಾನ್ಯ ಮಹಿಳೆಯರ ಪಾಡೇನು ಎಂಬುದು ಹಲವರ ಪ್ರಶ್ನೆ