alex Certify ರೋಗ ತಡೆಯಲು ಮಹತ್ವದ ಹೆಜ್ಜೆ: ಆರೋಗ್ಯ ಕ್ಷೇತ್ರದಲ್ಲಿ ಸುಧಾರಣೆ, ಚಲಿಸುವ ಆಸ್ಪತ್ರೆ ಪಾಡ್ ಗೆ ಚಾಲನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೋಗ ತಡೆಯಲು ಮಹತ್ವದ ಹೆಜ್ಜೆ: ಆರೋಗ್ಯ ಕ್ಷೇತ್ರದಲ್ಲಿ ಸುಧಾರಣೆ, ಚಲಿಸುವ ಆಸ್ಪತ್ರೆ ಪಾಡ್ ಗೆ ಚಾಲನೆ

ಬೆಂಗಳೂರು: ವೆವ್ರ ಸಂಸ್ಥೆ ಮತ್ತು ಪೋರ್ಚುಗೀಸ್ ನ ಇನೋವೇವ್ ಗ್ರೂಪ್ ಸಹಯೋಗದಲ್ಲಿ ಆರಂಭಿಸಿರುವ ಹೆಲ್ತ್ ಕೇರ್ ಪಾಡ್ ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಚಾಲನೆ ನೀಡಿದ್ದಾರೆ.

ನಗರದಲ್ಲಿ ಆನ್ ಲೈನ್ ಮೂಲಕ ನಡೆದ ಕಾರ್ಯಕ್ರಮದಲ್ಲಿ ಸಚಿವರು ಪಾಲ್ಗೊಂಡು ವೆವ್ರ ಪಾಡ್ ಸೌಲಭ್ಯವನ್ನು ಉದ್ಘಾಟಿಸಿದ್ದಾರೆ.

ನಂತರ ಮಾತನಾಡಿದ ಅವರು, ಈ ಪಾಡ್ ಗಳು ಚಲಿಸುವ ಆಸ್ಪತ್ರೆಯಂತಿದ್ದು, ಎಲ್ಲಿ ಬೇಕಾದರೂ ಅಳವಡಿಸಬಹುದಾಗಿದೆ. ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಒಳಗೊಂಡಿರುವ ಈ ವ್ಯವಸ್ಥೆಯಿಂದ ರೋಗ ಹರಡುವಿಕೆಯನ್ನು ತಡೆಗಟ್ಟಬಹುದಾಗಿದೆ. ಕೃತಕ ಬುದ್ಧಿಮತ್ತೆ ತಂತ್ರಜ್ಞಾನದಿಂದ ಆರೋಗ್ಯ ಕ್ಷೇತ್ರದಲ್ಲಿ ದೊಡ್ಡ ಸುಧಾರಣೆಯನ್ನೇ ತರಬಹುದು. ತಂತ್ರಜ್ಞಾನ ಕ್ಷೇತ್ರದ ನವೋದ್ಯಮಗಳು ಆಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು ಕಡಿಮೆ ವೆಚ್ಚದಲ್ಲಿ ಜನರಿಗೆ ಸೌಲಭ್ಯಗಳನ್ನು ಮಾಡಿಕೊಡುವ ಪ್ರಯತ್ನ ಮಾಡಬೇಕು ಎಂದು ಕಿವಿಮಾತು ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್, ಎಂಸಿಐ ಸದಸ್ಯ ಡಾ.ವಿವೇಕ್ ಜವಳಿ ಪಾಲ್ಗೊಂಡಿದ್ದರು.

ಒಂದು ಪಾಡ್ ನಲ್ಲಿ 4 ರಿಂದ 9 ಹಾಸಿಗೆಗಳಿರುತ್ತವೆ. ಈ ಪಾಡ್ ಗಳನ್ನು ಅಳವಡಿಸಲು 500 ಚದರ ಅಡಿ ಜಾಗ ಬೇಕಾಗುತ್ತದೆ. ಇವುಗಳನ್ನು ಆಸ್ಪತ್ರೆ, ಪಾರ್ಕಿಂಗ್ ಅಥವಾ ಯಾವುದೇ ಸುರಕ್ಷಿತವಾದ ಜಾಗದಲ್ಲಿ ಅಳವಡಿಸಬಹುದಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...