alex Certify ನಕಲಿ ವಿಡಿಯೋ ಹರಿಬಿಟ್ಟ ಕಿಡಿಗೇಡಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಕಲಿ ವಿಡಿಯೋ ಹರಿಬಿಟ್ಟ ಕಿಡಿಗೇಡಿ ಅರೆಸ್ಟ್

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಹೆಸರಲ್ಲಿ ನಕಲಿ ವಿಡಿಯೋ ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಸಮೀರ್ ವುಲ್ಲಾ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಅನ್ಯರಾಜ್ಯದ ಆಸ್ಪತ್ರೆಯ ವಿಡಿಯೋವನ್ನು ಹಂಚಿಕೊಂಡಿದ್ದ ಆರೋಪಿ ಬೆಂಗಳೂರಿನ ಆಸ್ಪತ್ರೆಯಲ್ಲಿನ ಅವ್ಯವಸ್ಥೆಯ ವಿಡಿಯೋ ಎಂದು ಪೋಸ್ಟ್ ಮಾಡಿದ್ದಾನೆ.

ಆಸ್ಪತ್ರೆಯೊಂದರ ಒಪಿಡಿ ಎದುರು ಜನ ಸಾಲುಗಟ್ಟಿ ನಿಂತಿರುವ ವಿಡಿಯೋ ಪೋಸ್ಟ್ ಮಾಡಿ ವಿಕ್ಟೋರಿಯಾ ಆಸ್ಪತ್ರೆಯ ದೃಶ್ಯವೆಂದು ಹಾಕಿದ್ದ ಹಿನ್ನಲೆಯಲ್ಲಿ ಬಂಧಿಸಲಾಗಿದ್ದು, ಮಾಹಿತಿ ತಂತ್ರಜ್ಞಾನ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕೇಸು ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...