
ವಿಜಯಪುರ: ಕ್ಯಾಂಟರ್, ಲಾರಿ ಮಧ್ಯೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಸಿಂದಗಿ ಬಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ನಡೆದಿದೆ.
ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಚಿಕ್ಕಸಿಂದಗಿ ಬಳಿ ಕ್ಯಾಂಟರ್ -ಲಾರಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಕ್ಯಾಂಟರ್ ಚಾಲಕ ಮತ್ತು ಕ್ಲೀನರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಲಾರಿ ಚಾಲಕ ಗಾಯಗೊಂಡಿದ್ದು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.