alex Certify ಯುವಕನನ್ನು ಪ್ರೀತಿಸಿದ ಅಪ್ರಾಪ್ತೆ: ಒಪ್ಪದ ಪೋಷಕರು, ದುಡುಕಿದ ಪ್ರೇಮಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯುವಕನನ್ನು ಪ್ರೀತಿಸಿದ ಅಪ್ರಾಪ್ತೆ: ಒಪ್ಪದ ಪೋಷಕರು, ದುಡುಕಿದ ಪ್ರೇಮಿಗಳು

ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಬನಹಟ್ಟಿಯಲ್ಲಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಕುಮಾರ್(19), ಶಬಾನಾ(16) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ.

ಅಪ್ರಾಪ್ತ ಬಾಲಕಿ ಶಬಾನಾ ಮತ್ತು ಯುವಕ ಶಿವಕುಮಾರ್ ಪ್ರೀತಿಸುತ್ತಿದ್ದು, ಇವರ ಪ್ರೀತಿಗೆ ಪೋಷಕರು ಒಪ್ಪದ ಹಿನ್ನೆಲೆಯಲ್ಲಿ ದುಡುಕಿನ ನಿರ್ಧಾರ ಕೈಗೊಂಡಿದ್ದಾರೆ.

ಮನನೊಂದು ಬನಹಟ್ಟಿ ಗ್ರಾಮದ ಹೊರವಲಯದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ದೇವರಹಿಪ್ಪರಗಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...