
ವಿಜಯಪುರ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿದ್ದ ಮೂವರನ್ನು ಕಾಂಗ್ರೆಸ್ ಜಿಲ್ಲಾಧ್ಯಕ್ಷರು ಉಚ್ಛಾಟನೆ ಮಾಡಿದ್ದಾರೆ.
ಜಿಪಂ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್ ವಿಪ್ ಉಲ್ಲಂಘಿಸಿ ಮೂವರು ಸದಸ್ಯರು ಬಿಜೆಪಿಗೆ ಮತ ಚಲಾಯಿಸಿದ್ದರು. ಈ ಮೂವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಜಿಲ್ಲಾಧ್ಯಕ್ಷ ರಾಜು ಆಳಗೂರ ತಿಳಿಸಿದ್ದಾರೆ.
ಜಿಲ್ಲಾ ಪಂಚಾಯಿತಿ ಸದಸ್ಯರಾದ ಶಿವಯೋಗಪ್ಪ ನೇದಲಗಿ, ಉಮೇಶ್ ಕೊಳ್ಳೂರ, ಶಿವಶರಣ ಬೈರಗೊಂಡ ಅವರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲಾಗಿದ್ದು, ಈ ಮೂವರ ಜಿಲ್ಲಾ ಪಂಚಾಯಿತಿ ಸದಸ್ಯತ್ವ ರದ್ದು ಮಾಡಲು ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.