alex Certify BIG BREAKING: ನ್ಯಾಯಾಂಗ ಬಂಧನಕ್ಕೆ ಮಾಜಿ ಸಚಿವ ವಿನಯ ಕುಲಕರ್ಣಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ನ್ಯಾಯಾಂಗ ಬಂಧನಕ್ಕೆ ಮಾಜಿ ಸಚಿವ ವಿನಯ ಕುಲಕರ್ಣಿ

ಧಾರವಾಡ: ಮಾಜಿ ಸಚಿವ ವಿನಯ ಕುಲಕರ್ಣಿ ಅವರಿಗೆ ನಾಳೆ ಸಂಜೆಯವರೆಗೆ ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ.

ಇಂದು ಬೆಳಗ್ಗೆ ಸಿಬಿಐ ಅಧಿಕಾರಿಗಳು ವಿನಯ ಕುಲಕರ್ಣಿ ಅವರನ್ನು ಬಂಧಿಸಿದ್ದರು. ಆರೋಗ್ಯ ತಪಾಸಣೆಯ ಬಳಿಕ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ್ ಕುಲಕರ್ಣಿ ಅವರನ್ನು ವಿಚಾರಣೆಗಾಗಿ ಉಪನಗರ ಠಾಣೆಗೆ ಕರೆಸಿಕೊಂಡಿದ್ದ ಸಿಬಿಐ ಅಧಿಕಾರಿಗಳು, ಸುದೀರ್ಘ ವಿಚಾರಣೆಯ ಬಳಿಕ ಬಂಧಿಸಿದ್ದರು.

ವಿನಯ ಕುಲಕರ್ಣಿ ಅವರನ್ನು ಸಿಬಿಐ ಬಂಧಿಸಿರುವುದನ್ನು ಅವರ ಬೆಂಬಲಿಗರು ತೀವ್ರವಾಗಿ ವಿರೋಧಿಸಿದ್ದು, ರಾಜ್ಯ ಮತ್ತು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...