
ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದಲ್ಲಿ ಮತ್ತೆ ವೋಟರ್ ಐಡಿ ಅಕ್ರಮದ ಸದ್ದು ಕೇಳಿ ಬರುತ್ತಿದೆ. ಬಿಜೆಪಿ ಅಭ್ಯರ್ಥಿ ಮುನಿರತ್ನ ವಿರುದ್ಧ ಅಕ್ರಮವೆಸಗಿದ ಆರೋಪ ಮಾಡಲಾಗಿದೆ.
ಮುನಿರತ್ನ ಅಕ್ರಮವಾಗಿ ವೋಟರ್ ಐಡಿ ಸಂಗ್ರಹಿಸಿರುವುದಾಗಿ ಕಾಂಗ್ರೆಸ್ ಪಕ್ಷದಿಂದ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ಚುನಾವಣಾ ಆಯುಕ್ತ ಸಂಜೀವ್ ಕುಮಾರ್ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಮತ್ತು ವಿ.ಎಸ್. ಉಗ್ರಪ್ಪ ಅವರು ದೂರು ನೀಡಿ ಕ್ರಮಕ್ಕೆ ಮನವಿ ಮಾಡಿದ್ದಾರೆ ಎಂದು ಹೇಳಲಾಗಿದೆ.