
ಆದರೆ ಬೆಳಗಾವಿ ಜಿಲ್ಲೆಯಲ್ಲಿ ನಡೆದ ಅಂತ್ಯಕ್ರಿಯೆ ಕಾರ್ಯಕ್ರಮವೊಂದರಲ್ಲಿ ಲಾಕ್ಡೌನ್ ನಿಯಮಗಳನ್ನ ಗಾಳಿಗೆ ತೂರಲಾಗಿದೆ. ಮರಡಿಮಠ ಏರಿಯಾದಲ್ಲಿ ನಡೆದ ಕುದುರೆಯ ಅಂತ್ಯಕ್ರಿಯೆಯಲ್ಲಿ ನೂರಕ್ಕೂ ಹೆಚ್ಚು ಜನರು ಭಾಗಿಯಾಗಿದ್ದಾರೆ. ಮಾಸ್ಕ್ ಹಾಕಿಕೊಳ್ಳದೇ ಸಾಮಾಜಿಕ ಅಂತರ ಪಾಲನೆ ಮಾಡದೇ ಜನರು ಓಡಾಡಿದ್ದಾರೆ.
ಈ ಪ್ರಕರಣ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸಹ ಈ ಘಟನೆ ಸಂಬಂಧ ಪ್ರತಿಕ್ರಿಯಿಸಿದ್ದು, ಈ ಪ್ರಕರಣವನ್ನ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಶೀಘ್ರದಲ್ಲೇ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತೆ ಎಂದು ಹೇಳಿದ್ದಾರೆ. ಇತ್ತ ಸಾರ್ವಜನಿಕರು ಸಹ ಸೋಶಿಯಲ್ ಮೀಡಿಯಾದಲ್ಲಿ ಜನರ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
https://twitter.com/ekintrepid/status/1396703952406650881