ಬೆಂಗಳೂರು: 2019 -2020 ನೇ ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆ ಪಲಿತಾಂಶ ಆಗಸ್ಟ್ 10 ರ ಇಂದು ಮಧ್ಯಾಹ್ನ 3 ಗಂಟೆಗೆ ಪ್ರಕಟವಾಗಲಿದೆ.
ವಿದ್ಯಾರ್ಥಿಗಳು http://www.karresults.nic.in, www.kseb.kar.nic.in ವೆಬ್ ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳು ನೊಂದಾಯಿಸಿದ ಮೊಬೈಲ್ ಸಂಖ್ಯೆಗೆ ಫಲಿತಾಂಶ ಸಂದೇಶ ಕಳುಹಿಸಲಾಗುವುದು.
ಜೂನ್ 25 ರಿಂದ ಜುಲೈ 4 ರವರೆಗೆ ಪರೀಕ್ಷೆ ನಡೆದಿದ್ದು ಸೋಮವಾರ ಮಧ್ಯಾಹ್ನ 3 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ.