alex Certify ವಾಟ್ಸಾಪ್ ನಲ್ಲಿ ಸೆಂಡ್ ಆಯ್ತು ಪತ್ನಿಯ ಖಾಸಗಿ ದೃಶ್ಯದ ವಿಡಿಯೋ: ಪತಿ ವಿರುದ್ಧ ದೂರು ನೀಡಿದ ಮಹಿಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾಟ್ಸಾಪ್ ನಲ್ಲಿ ಸೆಂಡ್ ಆಯ್ತು ಪತ್ನಿಯ ಖಾಸಗಿ ದೃಶ್ಯದ ವಿಡಿಯೋ: ಪತಿ ವಿರುದ್ಧ ದೂರು ನೀಡಿದ ಮಹಿಳೆ

ಬೆಂಗಳೂರು: ಪತ್ನಿಯ ಖಾಸಗಿ ದೃಶ್ಯಗಳನ್ನು ಚಿತ್ರೀಕರಿಸಿಕೊಂಡು ಫೇಸ್ಬುಕ್, ವಾಟ್ಸಾಪ್ನಲ್ಲಿ ಹರಿಬಿಟ್ಟಿದ್ದ ಕಿಡಿಗೇಡಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹೊಂಗಸಂದ್ರ ನಿವಾಸಿ ಹರಿಕೃಷ್ಣ ವಿರುದ್ಧ ವೈಟ್ ಫೀಲ್ಡ್ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಆರ್ ಪುರಂ ದೇವಸಂದ್ರ ನಿವಾಸಿಯಾಗಿರುವ ಮಹಿಳೆಗೆ 10 ವರ್ಷಗಳ ಹಿಂದೆ ಮದುವೆಯಾಗಿದ್ದು 2015 ರಲ್ಲಿ ವಿಚ್ಛೇದನ ಪಡೆದುಕೊಂಡಿದ್ದಾರೆ.

ನಂತರ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸಹೋದ್ಯೋಗಿ ಹರಿಕೃಷ್ಣನ ಪರಿಚಯವಾಗಿ ಒಂದು ವರ್ಷದ ಹಿಂದೆ ಮದುವೆಯಾಗಿದ್ದರು. ಪತ್ನಿ ಮೇಲೆ ಅನುಮಾನಗೊಂಡು ಕಿರುಕುಳ ನೀಡುತ್ತಿದ್ದ ಹರಿಕೃಷ್ಣ ವಿರುದ್ಧ ಬೊಮ್ಮನಹಳ್ಳಿ ಠಾಣೆಗೆ ಮಹಿಳೆ ದೂರು ನೀಡಿದ್ದಾರೆ. ಪೊಲೀಸರು ಇಬ್ಬರಿಗೂ ಬುದ್ಧಿವಾದ ಹೇಳಿ ಕಳಿಸಿದ್ದಾರೆ.

ಇತ್ತೀಚೆಗೆ ಪತ್ನಿ ಏಕಾಂತದಲ್ಲಿದ್ದ ಸಂದರ್ಭದಲ್ಲಿ ಆಕೆಯ ಖಾಸಗಿ ದೃಶ್ಯಗಳನ್ನು ಚಿತ್ರೀಕರಿಸಿಕೊಂಡಿದ್ದ ಹರಿಕೃಷ್ಣ ಸ್ನೇಹಿತರಿಗೆ ವಾಟ್ಸಾಪ್ ಮೂಲಕ ಕಳುಹಿಸಿದ್ದಾನೆ. ಅಲ್ಲದೇ, ಫೇಸ್ ಬುಕ್ ನಲ್ಲಿ ನಕಲಿ ಖಾತೆ ತೆರೆದು ವಿಡಿಯೋ ಅಪ್ ಲೋಡ್ ಮಾಡಿದ್ದಾನೆ ಎನ್ನಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...