ಬಳ್ಳಾರಿ: ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ 2019-20ನೇ ಸಾಲಿನ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಉಪಯೋಜನೆಯಡಿ ಬಳಕೆಯಾಗದ ಅನುದಾನದಲ್ಲಿ ಉದ್ಯೋಗಿನಿ ಯೋಜನೆಯಡಿ ಪ್ರೋತ್ಸಾಹಧನ ನೀಡಲಾಗುವುದು.
ವ್ಯಾಪಾರ ಸೇವಾ ಹಾಗೂ ಗುಡಿ ಕೈಗಾರಿಕೆ ಚಟುವಟಿಕೆಗಳು, ಸ್ವಯಂ ಉದ್ಯೋಗ ಹೊಂದಿದವರಿಗೆ ಮತ್ತು ಸ್ತ್ರೀಶಕ್ತಿ ಯೋಜನೆಯಡಿ ನೊಂದಣಿಯಾದ ಸ್ತ್ರೀಶಕ್ತಿ ಗುಂಪುಗಳಿಗೆ ಕಿರುಸಾಲ ಹಾಗೂ ನಗರ ಮತ್ತು ಗ್ರಾಮೀಣ ಪ್ರದೇಶದ ಬಡತನ ರೇಖೆಗಿಂತ ಕೆಳಗಿರುವ ಮಹಿಳಾ ವ್ಯಾಪಾರಿಗಳಿಗೆ ಆರ್ಥಿಕ ಸಬಲೀಕರಣಕ್ಕಾಗಿ ಪ್ರೋತ್ಸಾಹಧನಕ್ಕೆ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೂಡ್ಲಿಗಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.
ಫಲಾನುಭವಿಗಳು 18 ರಿಂದ 60 ವರ್ಷ ವಯೋಮಿತಿಯನ್ನು ಹೊಂದಿರಬೇಕು. ಅರ್ಜಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯದಲ್ಲಿ ಪಡೆದು ಭರ್ತಿ ಮಾಡಿ ದ್ವಿಪ್ರತಿಗಳಲ್ಲಿ ಅರ್ಜಿಗಳನ್ನು ಜೂ.6 ರೊಳಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕೂಡ್ಲಿಗಿ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ದೂ.ಸಂ.08391-220240 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.