ಬಳ್ಳಾರಿ: ರಾಷ್ಟ್ರೀಯ ಜೀವನೋಪಾಯ ಅಭಿಯಾನ ಯೋಜನೆಯಡಿಯಲ್ಲಿ 2020-21ನೇ ಸಾಲಿನ ಸ್ವಯಂ ಉದ್ಯೋಗ ಕಾರ್ಯಕ್ರಮದ ಉಪಘಟಕದ ವ್ಯಕ್ತಿಗತ ಉದ್ಯಮ ಶೀಲತೆ(ಸಾಲ ಮತ್ತು ಸಹಾಯ ಧನ) ಯೋಜನೆಯಡಿ ಸ್ವಯಂ ಉದ್ಯೋಗ ಕೈಗೊಳ್ಳುವ ಆಸಕ್ತಿಯಿರುವ ಸ್ವಸಹಾಯ ಗುಂಪಿನಲ್ಲಿ ಸದಸ್ಯರಿರುವ ಕುಟುಂಬದ ಅರ್ಹ ಫನಾನುಭವಿಗಳಿಂದ ಗುಂಪು ಉದ್ಯಮಿ ಶೀಲತೆ ಚಟುವಟಿಕೆಗಳಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಲು ಮಹಿಳಾ ಸ್ವ-ಸಹಾಯ ಗುಂಪು ಹಾಗೂ ಪ್ರದೇಶ ಮಟ್ಟದ ಒಕ್ಕೂಟವನ್ನು ರಚಿಸಲು ಆಸಕ್ತಿ ಹೊಂದಿದ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಿರುಗುಪ್ಪ ನಗರ ಸಭೆಯ ಪೌರ ಆಯುಕ್ತರು ತಿಳಿಸಿದ್ದಾರೆ.
ಫಲಾನುಭವಿಗಳು ಸಿರುಗುಪ್ಪ ನಗರಸಭೆ ನಿವಾಸಿಯಾಗಿದ್ದು, ಬಡತನ ರೇಖೆಗಿಂತ ಕೆಳಗಿನ ಕುಟುಂಬದವರಾಗಿರಬೇಕು. ಪಡಿತರ ಚೀಟಿ, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿದ್ಯಾರ್ಹತೆ ಪ್ರಮಾಣಪತ್ರ, ಮೂರು ಭಾವಚಿತ್ರಗಳು, ಗುಂಪಿಗೆ ಸಂಬಂಧಿಸಿದ ದಾಖಲೆಗಳು, ಬ್ಯಾಂಕ್ ಪಾಸ್ ಬುಕ್ ನಕಲು ಪ್ರತಿಯೊಂದಿಗೆ ನಿಗದಿತ ನಮೂನೆ ಹಾಗೂ ದಾಖಲೆಗಳೊಂದಿಗೆ ಜೂನ್ 30 ರೊಳಗಾಗಿ ಸಿರುಗುಪ್ಪ ನಗರಸಭೆ ಕಾರ್ಯಾಲಯಕ್ಕೆ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.