ಬೆಂಗಳೂರು: ರಾಜ್ಯಾದ್ಯಂತ ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ರಾತ್ರಿ ಪಾಳಿಯಲ್ಲಿ ಉದ್ಯೋಗ ನಿರ್ವಹಿಸಲು ಅವಕಾಶ ನೀಡಲಾಗಿದೆ.
ವಾಣಿಜ್ಯ ಮಳಿಗೆ, ಅಂಗಡಿಗಳಲ್ಲಿ ಮಹಿಳೆಯರು ರಾತ್ರಿ ಪಾಳಿ ಕೆಲಸ ಮಾಡಲು ಅವಕಾಶ ಕಲ್ಪಿಸಲಾಗಿದೆ. ಹಿಂದೆ ಅನಿವಾರ್ಯತೆ ಇದ್ದ ಸಂದರ್ಭದಲ್ಲಿ ಕಾರ್ಮಿಕ ಇಲಾಖೆಯಿಂದ ಅನುಮತಿ ಪಡೆದು ರಾತ್ರಿ ಪಾಳಿ ಕೆಲಸಕ್ಕೆ ಮಹಿಳೆಯರನ್ನು ನಿಯೋಜಿಸಬೇಕಿತ್ತು. ಈಗ ನಿಯಮ ರದ್ದುಪಡಿಸಿ ರಾತ್ರಿ ಪಾಳಿ ಕೆಲಸ ನಿರ್ವಹಿಸಲು ಅವಕಾಶ ನೀಡಲಾಗಿದೆ.
ಆದರೆ, ಮಹಿಳೆಯರಿಗೆ ಮೂಲಸೌಕರ್ಯ ಮತ್ತು ಭದ್ರತಾ ವ್ಯವಸ್ಥೆಯನ್ನು ಕಡ್ಡಾಯವಾಗಿ ಕಲ್ಪಿಸಬೇಕಿದೆ ಎಂದು ತಿಳಿಸಿದ್ದು, ಇಲ್ಲವಾದಲ್ಲಿ ಪರವಾನಿಗಿ ರದ್ದುಪಡಿಸಲಾಗುವುದು ಎಂದು ಸ್ಪಷ್ಟಪಡಿಸಲಾಗಿದೆ. ಕಾರ್ಮಿಕ ಇಲಾಖೆಯಲ್ಲಿ ನೋಂದಾಯಿತವಾದ ವಾಣಿಜ್ಯ ಮಳಿಗೆ, ಅಂಗಡಿ ಸ್ಥಳಗಳಲ್ಲಿ ಮಹಿಳೆಯರು ರಾತ್ರಿಪಾಳಿಯಲ್ಲಿ ಕೆಲಸ ನಿರ್ವಹಿಸಬಹುದು. ಗಾರ್ಮೆಂಟ್ಸ್ ಗಳಲ್ಲಿ ಹೆಚ್ಚಿನ ಸಂಖ್ಯೆಯ ಮಹಿಳೆಯರು ಕೆಲಸ ನಿರ್ವಹಿಸುತ್ತಿದ್ದಾರೆ. ರಾತ್ರಿ 8 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಕೆಲಸ ನಿರ್ವಹಿಸಬಹುದು. ರಾಜ್ಯಾದ್ಯಂತ ಎಲ್ಲಾ ಕ್ಷೇತ್ರಗಳಲ್ಲಿಯೂ ಮಹಿಳೆಯರು ರಾತ್ರಿ ಪಾಳಿ ಕೆಲಸ ಮಾಡಲು ಅವಕಾಶ ನೀಡಲಾಗಿದೆ ಎಂದು ಹೇಳಲಾಗಿದೆ.