ಶಿವಮೊಗ್ಗ: ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯು ಜಾರಿಗೊಳಿಸಿರುವ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ 11 ಅಸಂಘಟಿತ ವಲಯದ ಕಾರ್ಮಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಸಂಘಟಿತ ಕಾರ್ಮಿಕರಾದ ಹಮಾಲರು, ಗೃಹ ಕಾರ್ಮಿಕರು, ಟೈಲರ್ಸ್, ಚಿಂದಿ ಆಯುವವರು, ಮೆಕ್ಯಾನಿಕ್ಸ್, ಅಗಸರು, ಕ್ಷೌರಿಕರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು ಹಾಗೂ ಭಟ್ಟಿ ಕಾರ್ಮಿಕರು ಇಲಾಖೆ ವೆಬ್‍ಸೈಟ್ www.ksuwssb.karnataka.gov.in ಪೋರ್ಟಲ್‍ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-248940 ನ್ನು ಸಂಪರ್ಕಿಸುವುದು.