ಮಡಿಕೇರಿ: ರಾಜ್ಯ ಸರ್ಕಾರದ ಆದೇಶದನ್ವಯ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೊಂದಾಯಿತ ಕಟ್ಟಡ ಕಾರ್ಮಿಕ ಫಲಾನುಭವಿಗಳ ಖಾತೆಗೆ ಒಂದು ಬಾರಿಗೆ 5000 ರೂಪಾಯಿಗಳನ್ನು ಜಮಾ ಮಾಡಲಾಗುವುದು.
ಕಟ್ಟಡ ಮತ್ತು ಇತರೆ ನಿರ್ಮಾಣ ಕೆಲಸಗಳಲ್ಲಿ ತೊಡಗಿರುವ ಎಲ್ಲಾ ನೋಂದಾಯಿತ ಕಾರ್ಮಿಕರು ಯೋಜನೆಗೆ ಅರ್ಹರಾಗಿದ್ದು ಆಯಾ ತಾಲ್ಲೂಕಿನ ಹಿರಿಯ ನಿರೀಕ್ಷಕರು ಅಥವಾ ಜಿಲ್ಲಾ ಕಾರ್ಮಿಕ ಅಧಿಕಾರಿಗಳಿಗೆ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಕಾರ್ಮಿಕ ಇಲಾಖೆಯಲ್ಲಿ ನೊಂದಾಯಿಸಿದ ಗುರುತಿನ ಚೀಟಿಯ ಪ್ರತಿ, ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಮಾಹಿತಿ ಐಎಫ್ಎಸ್ಸಿ ಕೋಡ್, ಹೆಸರು ವಿಳಾಸ ಇರುವ ಬ್ಯಾಂಕ್ ಪಾಸ್ ಬುಕ್ ನೊಂದಿಗೆ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಲಾಗಿದೆ.