ಬೆಂಗಳೂರು: ಕಾರ್ಮಿಕರ ಕೆಲಸದ ಅವಧಿಯನ್ನು ಇಳಿಸಬೇಕೆಂದು ಹೈಕೋರ್ಟ್ ತಾಕೀತು ಮಾಡಿದ ಬೆನ್ನಲ್ಲೇ ರಾಜ್ಯ ಸರ್ಕಾರ ಆದೇಶವನ್ನು ಹಿಂಪಡೆದಿದೆ.
ಕಳೆದ ತಿಂಗಳು ಕಾರ್ಮಿಕರ ಕೆಲಸದ ಅವಧಿಯನ್ನು 10 ಗಂಟೆಗೆ ಹೆಚ್ಚಳ ಮಾಡಲಾಗಿತ್ತು. ಲಾಕ್ಡೌನ್ ಸಡಿಲಿಕೆ ಮಾಡಿದ ಸಂದರ್ಭದಲ್ಲಿ ಕೈಗಾರಿಕೆಗಳಲ್ಲಿ ಉತ್ಪಾದನೆ ಹೆಚ್ಚಳದ ಹಿನ್ನೆಲೆಯಲ್ಲಿ ಕೆಲಸದ ಅವಧಿಯನ್ನು 8 ಗಂಟೆಯಿಂದ 10 ಗಂಟೆಗೆ ಹೆಚ್ಚಳ ಮಾಡಲಾಗಿತ್ತು.
ರಾಜ್ಯ ಸರ್ಕಾರದ ಮೇ 22 ರಂದು ಈ ಕುರಿತಾಗಿ ಆದೇಶ ಹೊರಡಿಸಿದ್ದು ಮೂರು ತಿಂಗಳು ಕಾರ್ಮಿಕರು 10 ಕೆಲಸ ನಿರ್ವಹಿಸಬೇಕೆಂದು ಹೇಳಲಾಗಿತ್ತು. ಕಾರ್ಮಿಕರು, ಸಂಘಟನೆಗಳು ಸೇರಿದಂತೆ ಕಾರ್ಮಿಕ ವಲಯದಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಕೆಲಸದ ಅವಧಿ ಹೆಚ್ಚಳ ಮಾಡದಂತೆ ಒತ್ತಾಯಿಸಲಾಗಿತ್ತು.
ಬೆಂಗಳೂರಿನ ದೀಪಾಂಜಲಿ ನಗರದ ಹೆಚ್. ಮಾರುತಿ ಈ ಕುರಿತಾಗಿ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ಅವರಿದ್ದ ವಿಭಾಗೀಯ ಪೀಠ ಕಾರ್ಮಿಕರ ಕೆಲಸದ ಅವಧಿ ಹೆಚ್ಚಳ ಮಾಡಿರುವುದನ್ನು ಒಪ್ಪದೇ ಸರ್ಕಾರ ನಿರ್ಧಾರ ಬದಲಿಸಬೇಕೆಂದು ಸೂಚನೆ ನೀಡಿದ್ದು, ಈಗ ರಾಜ್ಯ ಸರ್ಕಾರ, ಕಾರ್ಮಿಕರ ಕೆಲಸದ ಅವಧಿಯನ್ನು ಹೆಚ್ಚಳ ಮಾಡಿ ಹೊರಡಿಸಿದ್ದ ಆದೇಶವನ್ನು ಹಿಂಪಡೆದಿದೆ ಎಂದು ಹೇಳಲಾಗಿದೆ.