ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ದೇವಿಕೇರಾ ಗ್ರಾಮದಲ್ಲಿ ಅಕ್ರಮ ಸಂಬಂಧದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.
35 ವರ್ಷದ ವ್ಯಕ್ತಿಯನ್ನು ಮಂಗಳವಾರ ರಾತ್ರಿ ಮನೆಯ ಮೇಲೆ ಮಲಗಿದ್ದ ವೇಳೆ ಕೊಲೆ ಮಾಡಲಾಗಿದೆ. ತಡ ರಾತ್ರಿ 12 ಗಂಟೆ ವೇಳೆಗೆ ಆಗಮಿಸಿದ್ದ ಶಿವಪ್ಪ ಎಂಬಾತ ವ್ಯಕ್ತಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸುರಪುರ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.