ಬೆಂಗಳೂರು: ಭಾರಿ ಮಳೆ ಹಿನ್ನೆಲೆಯಲ್ಲಿ 7 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ನಗರ, ಮೈಸೂರು, ಕೋಲಾರ, ರಾಮನಗರ ಜಿಲ್ಲೆಗಳಿಗೆ ಸೆಪ್ಟೆಂಬರ್ 2 ರಂದು ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಅದೇ ರೀತಿ ಮಲೆನಾಡು, ಕರಾವಳಿ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಮಳೆ ಪ್ರಮಾಣ ಸಾಮಾನ್ಯಕ್ಕಿಂತ ಹೆಚ್ಚಾಗುವ ನಿರೀಕ್ಷೆಯಿದೆ.
ಒಡಿಶಾ ಕರಾವಳಿ ಪ್ರದೇಶದಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕಳೆದ ವಾರ ಮುಂಗಾರುಮಳೆ ಚುರುಕಾಗಿತ್ತು. ಸೆಪ್ಟಂಬರ್ 4 ರಿಂದ 10 ರವರೆಗೆ ಉತ್ತರ ಒಳನಾಡಿನಲ್ಲಿ ಸಾಮಾನ್ಯ ಮಳೆಯಾಗಲಿದೆ ಎಂದು ಹೇಳಲಾಗಿದೆ.