ಬೆಂಗಳೂರು: ಮುಂಗಾರು ಮಳೆ ಕೆಲವೆಡೆ ಚುರುಕುಗೊಂಡಿದ್ದು ಕರಾವಳಿ, ಮಲೆನಾಡು ಪ್ರದೇಶದಲ್ಲಿ ಭಾರಿ ಮಳೆಯಾಗಿದೆ.
ಸೆಪ್ಟಂಬರ್ 2ರಿಂದ 5ರವರೆಗೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, 4 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಸನ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಕಾರಣ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕರಾವಳಿಯ ಉಡುಪಿ, ಉತ್ತರಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಧಾರಾಕಾರ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿಯೂ ಮಳೆ ಹೆಚ್ಚಾಗಲಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕರು ಹೇಳಿದ್ದಾರೆ.