ಬೆಂಗಳೂರು: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಎರಡು ದಿನಗಳಿಂದ ಮಳೆ ಅಬ್ಬರ ಮುಂದುವರೆದಿದ್ದು ಸೆಪ್ಟೆಂಬರ್ 3 ರಿಂದ 5 ರವರೆಗೆ ಒಳನಾಡಿನ ಜಿಲ್ಲೆಗಳು ಮತ್ತು ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಮುಂದಿನ ಎರಡು ದಿನಗಳ ಕಾಲ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಅದೇ ರೀತಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಕೊಪ್ಪಳ, ಗದಗ ಮೊದಲಾದ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಭದ್ರಾವತಿ ಮೊದಲಾದ ಕಡೆಗಳಲ್ಲಿ ಭಾರೀ ಮಳೆಯಿಂದ ಮನೆಗಳಿಗೆ ನೀರು ನುಗ್ಗಿದೆ. ಬೇಲೂರಿನಲ್ಲಿ ಗರಿಷ್ಠ 11 ಸೆ.ಮೀ. ಮಳೆಯಾಗಿದೆ. ಮಂಗಳವಾರ ರಾತ್ರಿ, ಬುಧವಾರ ಮಧ್ಯಾಹ್ನದ ನಂತರ ಅನೇಕ ಜಿಲ್ಲೆಗಳಲ್ಲಿ ಮಳೆಯಾಗಿದ್ದು, ರೈತಾಪಿ ವರ್ಗದಲ್ಲಿ ಸಂತಸ ತಂದಿದೆ ಎನ್ನಲಾಗಿದೆ.