ಬೆಂಗಳೂರು: ಕರಾವಳಿ ಪ್ರದೇಶದಲ್ಲಿ ನೈಋತ್ಯ ಮುಂಗಾರು ತೀವ್ರಗೊಂಡಿದ್ದು ಅದೇ ರೀತಿ ಉತ್ತರ ಒಳನಾಡು ಭಾಗದಲ್ಲಿಯೂ ಚುರುಕಾಗಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹೇಳಲಾಗಿದೆ.
ಸೆಪ್ಟಂಬರ್ 17 ರಂದು ಉತ್ತರ ಒಳನಾಡಿನ ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅದೇ ರೀತಿ ಕರಾವಳಿ ಪ್ರದೇಶದ ಉಡುಪಿ, ಉತ್ತರಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಶುಕ್ರವಾರದಿಂದ ಸತತ ಮೂರು ದಿನ ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.