ಬೆಂಗಳೂರು: ರಾಜ್ಯದ ಮಲೆನಾಡು ಮತ್ತು ಕರಾವಳಿ ಪ್ರದೇಶದಲ್ಲಿ ಮಳೆ ಮುಂದುವರೆದಿದೆ. 14 ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಪ್ರದೇಶದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಮಲೆನಾಡು ಭಾಗದ ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಅದೇ ರೀತಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.