alex Certify ‘ಅಂಪಾನ್’ ಚಂಡಮಾರುತ ಅಬ್ಬರ: ರಾಜ್ಯದಲ್ಲಿ 2 ದಿನ ಭಾರೀ ಮಳೆ, ಯೆಲ್ಲೋ ಅಲರ್ಟ್ ಎಚ್ಚರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಅಂಪಾನ್’ ಚಂಡಮಾರುತ ಅಬ್ಬರ: ರಾಜ್ಯದಲ್ಲಿ 2 ದಿನ ಭಾರೀ ಮಳೆ, ಯೆಲ್ಲೋ ಅಲರ್ಟ್ ಎಚ್ಚರಿಕೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಅಂಪಾನ್ ಚಂಡಮಾರುತ ಉಂಟಾಗಿದ್ದು ಇದರ ಪ್ರಭಾವದಿಂದ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಎರಡು ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡು, ಮಲೆನಾಡು ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಅಂಪಾನ್ ಚಂಡಮಾರುತದ ಪ್ರಭಾವದಿಂದ ಅರಬ್ಬಿ ಸಮುದ್ರದಲ್ಲಿ ಮಳೆಯ ಮಾರುತ ಚುರುಕುಗೊಂಡಿದೆ. ಇದರ ಪರಿಣಾಮ ರಾಜ್ಯದ ಉತ್ತರಕನ್ನಡ, ದಕ್ಷಿಣಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಮೈಸೂರು, ಹಾಸನ ಸೇರಿದಂತೆ ಹಲವೆಡೆ 65 ರಿಂದ 115 ಮಿ.ಮೀ. ನಷ್ಟು ಮಳೆಯಾಗುವ ನಿರೀಕ್ಷೆ ಇದೆ.

ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದ್ದು 2 -3 ದಿನಗಳ ಕಾಲ ಗಾಳಿಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವತಿಯಿಂದ ಮಾಹಿತಿ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...