ಬೆಂಗಳೂರು: ಮುಂದಿನ 24ಗಂಟೆಯಲ್ಲಿ ರಾಜ್ಯದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ಮೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದ್ದು, 19 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಬಂಗಾಳಕೊಲ್ಲಿಯಲ್ಲಿ ಜೂನ್ 19 ರ ವೇಳೆಗೆ ಮತ್ತೊಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದ್ದು ವಾತಾವರಣದಲ್ಲಿ ಬದಲಾಗಿ ತೇವಾಂಶದಿಂದ ಕೂಡಿದ ಗಾಳಿ ಚಲನೆ ಆಗುತ್ತಿದೆ. ಇದರ ಪರಿಣಾಮದಿಂದ ಮಲೆನಾಡು, ಕರಾವಳಿ, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಿದೆ.
ಉತ್ತರ ಒಳನಾಡು, ಕರಾವಳಿ, ಮಲೆನಾಡು ಭಾಗದಲ್ಲಿ ಮಂಗಳವಾರ ಉತ್ತಮ ಮಳೆಯಾಗಿದ್ದು, ಮುಂದಿನ 24 ಗಂಟೆಯಲ್ಲಿ ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ 204 ಮಿಲಿಮೀಟರ್ ವರೆಗೆ ಮಳೆಯಾಗುವ ಸಾಧ್ಯತೆ ಇದ್ದು ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.