ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಬಾಬು ಕಟಗಿ ಮತ್ತು ಶಂಕರ ಗೌಡ ಪಾಟೀಲ ಅವರ ವಿಚಾರಣೆ ನಡೆಸಲಾಗಿದೆ.
ಯೋಗೀಶ್ ಗೌಡ ಹತ್ಯೆ ನಡೆದ ಸಂದರ್ಭದಲ್ಲಿ ಇವರಿಬ್ಬರು ಹೆಡ್ ಕಾನ್ಸ್ಟೇಬಲ್ ಗಳಾಗಿ ಕಾರ್ಯನಿರ್ವಹಿಸುತ್ತಿದ್ದರು. ಧಾರವಾಡ ಉಪನಗರ, ಶಹರಾ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಬೆಂಗಳೂರಿನ ಗಂಗಾನಗರದ ಸಿಬಿಐ ಕಚೇರಿಯಲ್ಲಿ ಇವರಿಬ್ಬರ ವಿಚಾರಣೆ ನಡೆಸಲಾಗಿದೆ.
ಚಾರ್ಜ್ ಶೀಟ್ ನಟ್ನಲ್ಲಿ ಆರೋಪಿಗಳ ಕೃತ್ಯದ ಬಗ್ಗೆ ಉಲ್ಲೇಖಿಸಲಾಗಿದೆ. ಈಗ ಹತ್ಯೆಯ ಹಿಂದಿನ ರಹಸ್ಯ ಭೇದಿಸುತ್ತಿರುವ ಸಿಬಿಐ ಕೆಲ ರಾಜಕಾರಣಿಗಳ ಕೈವಾಡದ ಶಂಕೆ ಇರುವ ಹಿನ್ನೆಲೆಯಲ್ಲಿ ಇನ್ನಷ್ಟು ಖಾಸಗಿ ವ್ಯಕ್ತಿಗಳು ಮತ್ತು ಪೊಲೀಸರ ವಿಚಾರಣೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.