
ಕಾರವಾರ: ಲಂಚ ಸ್ವೀಕರಿಸುತ್ತಿದ್ದ ನಗರ ಯೋಜನಾ ಸದಸ್ಯ ಶಿವಾನಂದ ತಾಮ್ರಣ್ಣನವರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಕಾರವಾರ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಲಂಚ ಸ್ವೀಕರಿಸುವಾಗ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪ್ರಶಾಂತ ನಾಯಕ ಅವರಿಂದ 10,000 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಭೂ ಪರಿವರ್ತನೆ ಮಾಡಲು ಶಿವಾನಂದ ಲಂಚ ಸ್ವೀಕರಿಸುತ್ತಿದ್ದರು. ಇದೇ ವೇಳೆ ಲೋಕಾಯುಕ್ತ ಎಸ್ಪಿ ಕುಮಾರಚಂದ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.