ಬೆಂಗಳೂರು: ಪ್ರಸಕ್ತ ಸಾಲಿನ ಗೆಜೆಟೆಡ್ ಪ್ರಬೇಷನರ್ಸ್ 384 ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗದಿಂದ ಆಗಸ್ಟ್ 25ರಂದು ಪೂರ್ವಭಾವಿ ಪರೀಕ್ಷೆ ನಡೆಸಲಾಗುವುದು.
ಆಗಸ್ಟ್ 25ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಪತ್ರಿಕೆ-1, ಮಧ್ಯಾಹ್ನ 2 ರಿಂದ 4 ಸಂಜೆ 4 ಗಂಟೆವರೆಗೆ ಪತ್ರಿಕೆ -2 ಪರೀಕ್ಷೆ ಇರಲಿದೆ.
ಈ ಮೊದಲು ಜುಲೈ 21ರಂದು ಪೂರ್ವಭಾವಿ ಪರೀಕ್ಷೆಗೆ ದಿನಾಂಕ ನಿಗದಿಪಡಿಸಲಾಗಿತ್ತು. ಆದರೆ, ಸರ್ಕಾರ 2017 -18ರಲ್ಲಿ ಕೆಎಎಸ್ ಪರೀಕ್ಷೆ ಬರೆದಿದ್ದ ಎಲ್ಲಾ ಅಭ್ಯರ್ಥಿಗಳಿಗೂ ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಿ ಹೊಸ ದಿನಾಂಕ ನಿಗದಿಪಡಿಸಲಾಗಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಡಾ. ರಾಕೇಶ್ ಕುಮಾರ್ ತಿಳಿಸಿದ್ದಾರೆ.