
ಬೆಂಗಳೂರು: ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ 3, 5, 7 ಮತ್ತು 9ರಂದು ಮುಖ್ಯ ಪರೀಕ್ಷೆ ನಡೆಸಲು ಕರ್ನಾಟಕ ಲೋಕಸೇವಾ ಆಯೋಗ(KPSC) ನಿರ್ಧರಿಸಿದೆ.
ಡಿಸೆಂಬರ್ 29 ರಂದು ನಡೆದ ಪೂರ್ವಭಾವಿ ಮರು ಪರೀಕ್ಷೆಯಲ್ಲಿ 1:15ರ ಅನುಪಾತದಲ್ಲಿ ಮುಖ್ಯ ಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳ ನೋಂದಣಿ ಸಂಖ್ಯೆಯನ್ನು ಈಗಾಗಲೇ ಕರ್ನಾಟಕ ಲೋಕಸೇವಾ ಆಯೋಗ ಬಿಡುಗಡೆ ಮಾಡಿದೆ.
ಇದೇ ಮಾರ್ಚ್ 28, 29 ಮತ್ತು ಏಪ್ರಿಲ್ 1, 2 ರಂದು ಮುಖ್ಯ ಪರೀಕ್ಷೆ ನಡೆಸಲು ಕೆಪಿಎಸ್ಸಿ ನಿರ್ಧರಿಸಿತ್ತು. ಪ್ರಶ್ನೆ ಪತ್ರಿಕೆಯಲ್ಲಿ ಭಾಷಾಂತರ ಲೋಪ ಕಂಡುಬಂದ ಕಾರಣ ಮತ್ತೊಮ್ಮೆ ಪೂರ್ವಭಾವಿ ಪರೀಕ್ಷೆಗೆ ಆಗ್ರಹಿಸಿ ಕೆಲವು ಅಭ್ಯರ್ಥಿಗಳು ಕೆಎಟಿ ಮೊರೆ ಹೋಗಿದ್ದರು. ಹೀಗಾಗಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಪ್ರಕರಣವನ್ನು ಕೆಎಟಿ ವಿಲೇವಾರಿ ಮಾಡಿದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ ಮುಖ್ಯ ಪರೀಕ್ಷೆಗೆ ಹೊಸ ದಿನಾಂಕ ನಿಗದಿಪಡಿಸಿದೆ. http://kpsc.kar.nic.in ವೆಬ್ಸೈಟ್ ನಲ್ಲಿ ಮುಖ್ಯ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಲಾಗಿದೆ.