alex Certify ಆ. 25 ರಂದು ಕೆಎಎಸ್ ಪೂರ್ವಭಾವಿ ಪರೀಕ್ಷೆಗೆ ದಿನಾಂಕ ಮರು ನಿಗದಿ: ವಯಸ್ಸಿನ ನಿರ್ಬಂಧವಿಲ್ಲದೇ ಅರ್ಜಿ ಸಲ್ಲಿಕೆಗೆ 15 ದಿನ ಕಾಲಾವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆ. 25 ರಂದು ಕೆಎಎಸ್ ಪೂರ್ವಭಾವಿ ಪರೀಕ್ಷೆಗೆ ದಿನಾಂಕ ಮರು ನಿಗದಿ: ವಯಸ್ಸಿನ ನಿರ್ಬಂಧವಿಲ್ಲದೇ ಅರ್ಜಿ ಸಲ್ಲಿಕೆಗೆ 15 ದಿನ ಕಾಲಾವಕಾಶ

ಬೆಂಗಳೂರು: ಆ. 25 ರಂದು ಕೆಎಎಸ್ ಪೂರ್ವಭಾವಿ ಪರೀಕ್ಷೆಗೆ ದಿನಾಂಕ ಮರು ನಿಗದಿ ಮಾಡಲಾಗಿದೆ. ವಯಸ್ಸಿನ ನಿರ್ಬಂಧವಿಲ್ಲದೇ ಅರ್ಜಿ ಸಲ್ಲಿಕೆಗೆ 15 ದಿನ ಕಾಲಾವಕಾಶ ನೀಡಲಾಗಿದೆ.

ಸರ್ಕಾರದ ಆದೇಶದನ್ವಯ 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ವಯಸ್ಸಿನ ನಿರ್ಬಂಧವಿಲ್ಲದೆ ಒಂದು ಬಾರಿಗೆ ಸೀಮಿತಗೊಳಿಸಿ(one time measure) ಅರ್ಜಿ ಸಲ್ಲಿಸಲು ಹೆಚ್ಚುವರಿ ವಿಶೇಷ ಅವಕಾಶವನ್ನು ನೀಡಲಾಗಿದೆ.

2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕರ್ನಾಟಕ ಲೋಕಸೇವಾ ಆಯೋಗವು 15 ದಿನಗಳ ಕಾಲಾವಕಾಶವನ್ನು ನೀಡುವಂತೆ ಆದೇಶಿಸಿರುತ್ತದೆ. ಈ ಹಿನ್ನೆಲೆಯಲ್ಲಿ ಆಯೋಗವು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 384 ಹುದ್ದೆಗಳಿಗೆ ದಿನಾಂಕ:21-07-2024ರಂದು ನಡೆಸಬೇಕಿದ್ದ ಪೂರ್ವಭಾವಿ ಪರೀಕ್ಷೆಯನ್ನು ದಿನಾಂಕ:25-08-2024ರಂದು ನಡೆಸಲು ಮರುನಿಗದಿಪಡಿಸಿರುತ್ತದೆ ಎಂದು ಕರ್ನಾಟಕ ಲೋಕಸೇವಾ ಆಯೋಗ ಕಾರ್ಯದರ್ಶಿ ಡಾ.ರಾಕೇಶ್ ಕುಮಾರ್ ಕೆ. ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...