![](https://kannadadunia.com/wp-content/uploads/2023/09/Narayanagowda.jpg)
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ ಸಿ) ನಡೆಸಿರುವ ಕೆ ಎ ಎಸ್ ಪರೀಕ್ಷೆಗಳಲ್ಲಿ ಮತ್ತೆ ಕನ್ನಡ ಮಾಧ್ಯಮ ಅಭ್ಯರ್ಥಿಗಳಿಗೆ ಆಗಿರುವ ಅನ್ಯಾಯ ಖಂಡಿಸಿ ಬೆಂಗಳೂರಿನಲ್ಲಿ ಹೋರಾಟ ನಡೆಸಲು ಕರ್ನಾಟಕ ರಕ್ಷಣಾ ವೇದಿಕೆ ಸಜ್ಜಾಗಿದೆ.
ಬೆಂಗಳೂರಿನಲ್ಲಿ ಫೆಬ್ರವರಿ 18ರಂದು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ತಿಳಿಸಿದ್ದಾರೆ.
ಅನ್ಯಾಯಕ್ಕೆ ಒಳಗಾಗಿರುವ ಸಾವಿರಾರು ಅಭ್ಯರ್ಥಿಗಳು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಹಿಂದೆ ಪ್ರಶ್ನೆ ಪತ್ರಿಕೆಯಲ್ಲಿ ಕನ್ನಡ ಅನುವಾದದ ಸಂಸ್ಯೆ ಕಂದುಬಂದ ಹಿನ್ನೆಲೆಯಲ್ಲಿ ಆದ ಅನ್ಯಾಯದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಪ್ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ಚಳುವಳಿ ಹಮ್ಮಿಕೊಂಡಿತ್ತು. ನಮ್ಮ ಚಳುವಳಿಗೆ ಸಪಂದಿಸಿ ಸಿಎಂ ಸಿದ್ದರಾಮಯ್ಯ ಮರುಪರೀಕ್ಷೆಗೆಆದೇಶಿಸಿದ್ದರು. ಆದರೆ ಮರು ಪರೀಕ್ಷೆಯಲ್ಲಿಯೂ ಕನ್ನಡ ಅನುವಾದದ ಸಮಸ್ಯೆಯಾಗಿದೆ. ಕನ್ನಡದಲ್ಲೇ ಪ್ರಶ್ನೆ ಪತ್ರಿಕೆ ತಯಾರಿಸಿ ಬಳಿಕ ಇಂಗ್ಲೀಷ್ ಗೆ ಅನುವಾದಿಸುವಂತೆ ನಾವು ಈ ಹಿಂದೆಯೇ ಹೇಳಿದ್ದೆವು. ಆದರೆ ಅಧಿಕಾರಿಗಳ ದುರಂಹಂಕಾರದಿಂದ ಮತ್ತೆ ಮತ್ತೆ ತಪ್ಪುಗಳು ನಡೆಯುತ್ತಿದ್ದು, ಕನ್ನಡವನ್ನು ತಪ್ಪಾಗಿ ಅನುವಾದಿಸಲಾಗುತ್ತಿದೆ. ಇದರಿಂದ ಕನ್ನಡ ಮಾಧ್ಯಮದಲ್ಲಿ ಕಲಿತ ಅಭ್ಯರ್ಥಿಗಳಿಗೆ ತೊಂದರೆಯಾಗುತ್ತಿದೆ. ಇದನ್ನು ಖಂಡಿಸಿ ಹೋರಾಟ ನಡೆಸಲಾಗುವುದು ಎಂದು ತಿಳಿಸಿದ್ದಾರೆ.