
ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ 277 ಗ್ರೂಪ್ ಬಿ ಹುದ್ದೆಗಳ ನೇಮಕಾತಿಗೆ ಭಾನುವಾರ ರಾಜ್ಯದ 478 ಪರೀಕ್ಷಾ ಕೇಂದ್ರಗಳಲ್ಲಿ ಕೆಪಿಎಸ್ಸಿ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುವುದು.
ಬೆಳಗ್ಗೆ 10 ಗಂಟೆಯಿಂದ 11:30ವರೆಗೆ ನಡೆಯುವ ಪತ್ರಿಕೆ -1ರ ಪರೀಕ್ಷೆಗೆ ಒಟ್ಟು 1,81,314 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಸುಸೂತ್ರವಾಗಿ ಪರೀಕ್ಷೆ ನಡೆಸಲು ಎಲ್ಲಾ ಅಗತ್ಯ ಕ್ರಮವಹಿಸಲಾಗಿದೆ. ಪ್ರವೇಶ ಪತ್ರದಲ್ಲಿನ ಸೂಚನೆಗಳನ್ನು ಅಭ್ಯರ್ಥಿಗಳು ಸರಿಯಾಗಿ ಓದಿಕೊಂಡು ಪರೀಕ್ಷೆಗೆ ಹಾಜರಾಗಲು ಕರ್ನಾಟಕ ಲೋಕಸೇವಾ ಆಯೋಗ ಸೂಚನೆ ನೀಡಿದೆ.
ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳಲ್ಲಿನ ಅವ್ಯವಹಾರ ತಡೆಗಟ್ಟಲು ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ನಿಷೇಧಾಜ್ಞೆ ಜಾರಿಗೊಳಿಸಿದೆ. ಈ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿನ ಜೆರಾಕ್ಸ್ ಅಂಗಡಿ ಮತ್ತು ಕಂಪ್ಯೂಟರ್ ಇಂಟರ್ನೆಟ್ ಕೇಂದ್ರಗಳನ್ನು ಜ.19 ಮತ್ತು 25ರಂದು ಬೆಳಿಗ್ಗೆ 9 ರಿಂದ ಸಂಜೆ 5 ರವರಗೆ ಮುಚ್ಚುವಂತೆ ಮತ್ತು ಪರೀಕ್ಷಾ ಕೇಂದ್ರಗಳಿಗೆ ಅಭ್ಯರ್ಥಿಯು ಯಾವುದೇ ಕಾರಣಕ್ಕೂ ಮೊಬೈಲ್ ಫೋನ್ ಮತ್ತು ಎಲೆಕ್ಟ್ರಾನಿಕ್ ಉಪಕರಣಗಳನ್ನು ತರದಂತೆ ಆದೇಶಿಸಲಾಗಿದೆ.