ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಿಂದ 2023- 24 ನೇ ಸಾಲಿನಲ್ಲಿ 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ಹೆಚ್ಚುವರಿಗಾಗಿ 120 ಹುದ್ದೆಗಳನ್ನು ಸೇರ್ಪಡೆ ಮಾಡಿ 504 ಹುದ್ದೆಗಳಿಗೆ ನೇಮಕಾತಿ ನಡೆಸುವ ಸಾಧ್ಯತೆ ಇದೆ.
ಕೊರೋನಾ ಸೇರಿ ನಾನಾ ಕಾರಣಗಳಿಂದ ಕಳೆದ ಆರು ವರ್ಷಗಳಿಂದ ಕೆಎಎಸ್ ಹುದ್ದೆಗಳಿಗೆ ನೇಮಕಾತಿ ನಡೆದಿರಲಿಲ್ಲ. ಹೀಗಾಗಿ ಕೊನೆಯ ಬಾರಿ ಅಂದರೆ 2017 -18ರಲ್ಲಿ ಅರ್ಜಿ ಸಲ್ಲಿಸಿದವರಿಗೆ ವಯಸ್ಸಿನ ನಿರ್ಬಂಧವಿಲ್ಲದೆ ಈ ಬಾರಿ ಅರ್ಜಿ ಸಲ್ಲಿಕೆಗೆ ವಿಶೇಷ ಅವಕಾಶ ಕಲ್ಪಿಸಲು ಸರ್ಕಾರ ನಿರ್ಧರಿಸಿದೆ. ಈ ಕಾರಣ ಹುದ್ದೆಗಳ ಸಂಖ್ಯೆ ಹೆಚ್ಚಿಸಬೇಕೆಂಬ ಒತ್ತಾಯ ಕೇಳಿ ಬಂದಿದ್ದು, ಸರ್ಕಾರ 120 ಹುದ್ದೆಗಳನ್ನು ಹೆಚ್ಚಿಸಲು ಮುಂದಾಗಿದೆ. 384 ಹುದ್ದೆಗಳಿಗೆ ಈಗಾಗಲೇ 1.95 ಲಕ್ಷ ಅರ್ಜಿ ಸಲ್ಲಿಕೆಯಾಗಿವೆ. ಹುದ್ದೆಗಳ ಹೆಚ್ಚಳ ಸಹಿತ ಪರಿಸ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಲೋಕಸೇವಾ ಆಯೋಗ ಮುಂದಿನ ದಿನಗಳಲ್ಲಿ ಪ್ರಕಟಿಸಲಿದೆ ಎಂದು ಹೇಳಲಾಗಿದೆ.