ಕರ್ನಾಟಕ ಲೋಕಸೇವಾ ಆಯೋಗ ವತಿಯಿಂದ ನಡೆಸುವ ಕೆ.ಎ.ಎಸ್. ಹುದ್ದೆಗಾಗಿ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲಿರುವ ಪರೀಕ್ಷಾರ್ಥಿಗಳಿಗೆ ಡಿ.9 ರಿಂದ 19 ರವರೆಗೆ ಉಚಿತ ಪರೀಕ್ಷಾಪೂರ್ವ ತರಬೇತಿ ನೀಡಲಾಗುವುದು.
ದಾವಣಗೆರೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ಉಚಿತ ಪರೀಕ್ಷಾಪೂರ್ವ ತರಬೇತಿಯನ್ನು ಗಾಂಧಿ ಭವನ, ಡಿ.ಹೆಚ್.ಓ ಕಚೇರಿ ಪಕ್ಕ, ಎಸ್.ಓ.ಜಿ. ಕಾಲೋನಿ, ಶ್ರೀ ರಾಮನಗರ ರಸ್ತೆ ದಾವಣಗೆರೆ ಇಲ್ಲಿ ಆಯೋಜಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಮೊ.ಸಂ: 7406323294 ಸಂಪರ್ಕಿಸಲು ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ.ಡಿ. ತಿಳಿಸಿದ್ದಾರೆ.