ಚಿಕ್ಕಮಗಳೂರು: ಸರ್ಕಾರಿ ಭೂಮಿ ಕಬಳಿಕೆ ಆರೋಪದಲ್ಲಿ ಬಂಧನಕ್ಕೀಡಾಗಿದ್ದ ಕೆಎಎಸ್ ಅಧಿಕಾರಿ ಉಮೇಶ್ ಬಿಡುಗಡೆಯಾಗಿ ಹೊರ ಬರುತ್ತಿದ್ದಂತೆ ಮತ್ತೆ ಬಂಧನಕ್ಕೀಡಾಗಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಕಡಬ ತಾಲೂಕಿನ ಉಳ್ಳಿನಾಗರ ಜಮೀನು ಕಬಳಿಕೆ ಪ್ರಕರಣದಲ್ಲಿ ಬಂಧಿಸಲ್ಪಟ್ಟಿದ್ದ ಅಧಿಕಾರಿ ಉಮೇಶ್, ಜಾಮೀನು ಪಡೆದು ಜೈಲಿನಿಂದ ಹೊರ ಬಂದಿದ್ದರು. ಜೈಲಿನಿಂದ ಉಮೇಶ್ ಹೊರಬರುತ್ತಿದ್ದಂತೆ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.
ಹುಲಿ ಸಂರಕ್ಷಣ ಪ್ರದೇಶದಲ್ಲಿಯೂ ಉಮೇಶ್ ಅಕ್ರಮವೆಸಗಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ನಿಟ್ಟಿನಲ್ಲಿ ಅರಣ್ಯ ಇಲಾಖೆಗೆ ವರದಿ ಸಲ್ಲಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಕೆಎಎಸ್ ಅಧಿಕಾರಿ ಉಮೇಶ್ ಅವರನ್ನು ಅರಣ್ಯ ಸಿಬ್ಬಂದಿಗಳು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.