
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ KAS ಪೂರ್ವಭಾವಿ ಪರೀಕ್ಷಾ ವೇಳಾಪಟ್ಟಿ ಮತ್ತು ತಿದ್ದುಪಡಿ ಅಧಿಸೂಚನೆ ಪ್ರಕಟಿಸಿದೆ.
2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 384 ಹುದ್ದೆಗಳಿಗೆ ದಿನಾಂಕ:27-08-2024ರಂದು ಪೂರ್ವಭಾವಿ ಪರೀಕ್ಷೆಯನ್ನು ನಡೆಸಲಾಗಿತ್ತು. ಪ್ರಸ್ತುತ ದಿನಾಂಕ:01-10-2024ರ ತಿದ್ದುಪಡಿ ಅಧಿಸೂಚನೆ-4ರನ್ವಯ ಪೂರ್ವಭಾವಿ ಮರುಪರೀಕ್ಷೆಯನ್ನು 2:29-12-2024 ನಿಗದಿಪಡಿಸಲಾಗಿದೆ.
ಪರೀಕ್ಷಾ ವೇಳಾಪಟ್ಟಿ ಮತ್ತು ತಿದ್ದುಪಡಿ ಅಧಿಸೂಚನೆಯನ್ನು ಆಯೋಗದ ವೆಬ್‌ಸೈಟ್ http://kpsc.kar.nic.inನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿರುತ್ತದೆ ಎಂದು ಕರ್ನಾಟಕ ಲೋಕಸೇವಾ ಆಯೋಗ ಕಾರ್ಯದರ್ಶಿ ತಿಳಿಸಿದ್ದಾರೆ.
