![](https://kannadadunia.com/wp-content/uploads/2022/04/jobs-1613817686.jpg)
ಬೆಂಗಳೂರು: ವಿವಿಧ ಇಲಾಖೆಗಳಲ್ಲಿ ಖಾಲಿ ಉಳಿದಿರುವ ಕೆಎಎಸ್ ಗೆಜೆಟೆಡ್ ಪ್ರೊಬೆಷನರಿ 656 ಹುದ್ದೆಗಳ ನೇಮಕಾತಿಗೆ ಅನುಮತಿ ಕೋರಿ ಸಲ್ಲಿಸಿದ್ದ ಪ್ರಸ್ತಾವನೆಗೆ ಆರ್ಥಿಕ ಇಲಾಖೆ ಸಮ್ಮತಿಸಿದ್ದು, 504 ಹುದ್ದೆಗಳ ಭರ್ತಿಗೆ ಒಪ್ಪಿಗೆ ಸೂಚಿಸಿದೆ. ಶೀಘ್ರವೇ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳಲ್ಲಿ ಖಾಲಿ ಉಳಿದ 656 ಹುದ್ದೆಗಳ ಭರ್ತಿಗೆ ಅನುಮತಿ ಕೋರಿ ಪ್ರಸ್ತಾವನೆ ಸಲ್ಲಿಸಲಾಗಿತ್ತು. 504 ಹುದ್ದೆಗಳ ನೇಮಕಾತಿಗೆ ಹಣಕಾಸು ಇಲಾಖೆ ಸಮ್ಮತಿಸಿದೆ.
ವಾಣಿಜ್ಯ ತೆರಿಗೆ ಇಲಾಖೆಯಲ್ಲಿ 140 ಹುದ್ದೆಗಳ ಭರ್ತಿಗೆ ಒಪ್ಪಿಗೆ ಸಿಕ್ಕಿದೆ. ಕಂದಾಯ ಇಲಾಖೆಯಲ್ಲಿ 76, ಖಜಾನೆ ಇಲಾಖೆಯಲ್ಲಿ 48, ಸಮಾಜ ಕಲ್ಯಾಣ ಇಲಾಖೆಯಲ್ಲಿ 27, ಸಹಕಾರ ಇಲಾಖೆಯಲ್ಲಿ 21, ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 55, ಡಿಎಪಿಆರ್ ಇಲಾಖೆಯಲ್ಲಿ 85 ಹುದ್ದೆಗಳ ಭರ್ತಿಗೆ ಒಪ್ಪಿಗೆ ದೊರೆತಿದೆ.