ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ ಇಂದು ಮತದಾನ ನಡೆಯಲಿದೆ. ರಾಜ್ಯ ಘಟಕ, ಜಿಲ್ಲಾ ಘಟಕ ಹಾಗೂ ಗಡಿನಾಡು ಘಟಕಗಳಿಗೆ ಇಂದು ಮತದಾನ ನಡೆಯಲಿದೆ.
ಕನ್ನಡಪರ ಹೋರಾಟಗಾರರು, ಸಾಹಿತಿಗಳು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಸೇರಿದಂತೆ ಹಲವು ಪ್ರಮುಖರು ಚುನಾವಣೆಗೆ ಸ್ಪರ್ಧಿಸಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ ಕೇಂದ್ರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ 21 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 30 ಜಿಲ್ಲಾ ಘಟಕಗಳ ಅಧ್ಯಕ್ಷ ಸ್ಥಾನಕ್ಕೆ 223 ವ್ಯಕ್ತಿಗಳು ಸ್ಪರ್ಧಿಸಿದ್ದು, ಒಟ್ಟು 3.10 ಲಕ್ಷ ಮತದಾರರು ಮತದಾನ ಮಾಡಲಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯಲ್ಲಿ ಅಧಿಕೃತ ವೆಬ್ಸೈಟ್ ನಲ್ಲಿ(www.Kasapa.in) ಸದಸ್ಯರ ಹೆಸರು ಮತ್ತು ಸದಸ್ಯತ್ವ ಪಡೆದ ದಿನಾಂಕ, ಸದಸ್ಯತ್ವ ಸಂಖ್ಯೆ ಹೆಸರು ಪ್ರಕಟಿಸಲಾಗಿದೆ. ಜಿಲ್ಲಾಧ್ಯಕ್ಷರ ಚುನಾವಣೆ ಫಲಿತಾಂಶ ಇವತ್ತೇ ಘೋಷಣೆಯಾಗಲಿದ್ದು, ನವೆಂಬರ್ 24ರಂದು ಗಡಿನಾಡು ಘಟಕಗಳ ಅಧ್ಯಕ್ಷರು, ಕೇಂದ್ರ ಸಮಿತಿ ಫಲಿತಾಂಶ ಘೋಷಣೆಯಾಗಲಿದೆ.