ಬೆಂಗಳೂರು: ಪಂಪ ಮಹಾಕವಿ ರಸ್ತೆ ಹೆಸರು ಬದಲಾವಣೆ ವಿಚಾರವನ್ನು ಕನ್ನಡ ಸಾಹಿತ್ಯ ಪರಿಷತ್ ಕೈಬಿಟ್ಟಿದೆ. ಪಂಪ ಮಹಾಕವಿ ರಸ್ತೆ ಹೆಸರು ಬದಲಾವಣೆ ಪ್ರಸ್ತಾಪಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಈ ವಿಚಾರದಿಂದ ಹಿಂದೆ ಸರಿದಿದೆ.
ಪಂಪ ಮಹಾಕವಿ ರಸ್ತೆ ಹೆಸರು ಬದಲಿಸಿ ಕನ್ನಡ ಸಾಹಿತ್ಯ ಪರಿಷತ್ ರಸ್ತೆ ಎಂದು ಮರುನಾಮಕರಣಕ್ಕೆ ಕಸಾಪ ಮುಂದಾಗಿತ್ತು. ರಸ್ತೆಯ ಅರ್ಧ ಕಿ.ಮೀ.ಗೆ ಕನ್ನಡ ಸಾಹಿತ್ಯ ಪರಿಷತ್ ರಸ್ತೆ ಎಂದು ನಾಮಕರಣ ಮಾಡಲು ಚಿಂತನೆ ನಡೆದಿತ್ತು.
ಇದಕ್ಕೆ ಜೈನ ಸಮುದಾಯ, ಸಾಹಿತ್ಯ ವಲಯ ಸೇರಿದಂತೆ ವಿವಿಧ ವಲಯಗಳಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಹೆಸರು ಬದಲಾವಣೆ ಕೈಬಿಟ್ಟಿದೆ. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ್ ಜೋಶಿ ಅವರು ಈ ಬಗ್ಗೆ ಮಾಹಿತಿ ನೀಡಿ, ಪಂಪ ಮಹಾಕವಿ ರಸ್ತೆಯ ಹೆಸರು ಬದಲಾವಣೆ ಇಲ್ಲ. ಇದೆ ಹೆಸರು ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.