ಕೊಟ್ಟೂರು: ಕಾಶಿ ಯಾತ್ರೆ ಕೈಗೊಳ್ಳುವ ಭಕ್ತರಿಗೆ 5000 ರೂ. ಸಬ್ಸಿಡಿ ಮತ್ತು ವಿಶೇಷ ರೈಲು ವ್ಯವಸ್ಥೆ ಮಾಡಲಾಗುವುದು ಎಂದು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.
ರೈಲಿನ ಪ್ರತಿ ಬೋಗಿಗೆ ರಾಜ್ಯದ ಪ್ರಸಿದ್ಧ ದೇವಾಲಯಗಳಿರುವ ಚಿತ್ರ ಹಾಕಲಾಗುವುದು. ಶ್ರಾವಣ ಮಾಸದ ಎರಡನೇ ವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರೈಲಿಗೆ ಚಾಲನೆ ನೀಡಲಿದ್ದಾರೆ ಎಂದರು.
ರಾಜ್ಯದಿಂದ ಕಾಶಿಯಾತ್ರೆ ಕೈಗೊಳ್ಳುವವರಿಗೆ 5 ಸಾವಿರ ರೂಪಾಯಿ ಸಬ್ಸಿಡಿ ನೀಡಲಿದ್ದು, ಈಗಾಗಲೇ ರಾಜ್ಯಾದ್ಯಂತ 30 ಸಾವಿರ ಭಕ್ತರು ಹೆಸರು ನೋಂದಾಯಿಸಿಕೊಂಡಿದ್ದಾರೆ. ಕೇಂದ್ರ ಸರ್ಕಾರದ ಪ್ರವಾಸೋದ್ಯಮ ಇಲಾಖೆ ಭಾರತ ಗೌರವ್ ಯೋಜನೆಯೊಂದಿಗೆ ರಾಜ್ಯ ಸರ್ಕಾರ ಒಪ್ಪಂದ ಮಾಡಿಕೊಂಡು ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗಿದೆ. ರೈಲಿನಲ್ಲಿ ಧ್ಯಾನ, ಭಜನೆ ಮಾಡಲು ಅವಕಾಶ ಇರುತ್ತದೆ ಎಂದು ಹೇಳಿದ್ದಾರೆ.