alex Certify BREAKING NEWS: ನಟಿ ಅಮ್ರೀನ್ ಭಟ್ ಹತ್ಯೆಗೈದಿದ್ದ ಉಗ್ರರ ಎನ್ ಕೌಟರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ನಟಿ ಅಮ್ರೀನ್ ಭಟ್ ಹತ್ಯೆಗೈದಿದ್ದ ಉಗ್ರರ ಎನ್ ಕೌಟರ್

ಶ್ರೀನಗರ: ನಟಿ ಅಮ್ರೀನ್ ಭಟ್ ಅವರನ್ನು ಗುಂಡಿಕ್ಕಿ ಕೊಂದ ಉಗ್ರರನ್ನು ಹತ್ಯೆಗೈಯಲಾಗಿದೆ. ಲಷ್ಕರ್ ಎ ತೊಯ್ಬಾ ಸಂಘಟನೆಯ ಇಬ್ಬರು ಉಗ್ರರನ್ನು ಜಮ್ಮು ಮತ್ತು ಕಾಶ್ಮೀರ ರಾಜಧಾನಿ ಶ್ರೀನಗರದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ.

ಮೇ 25 ರಂದು ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಭಯೋತ್ಪಾದಕರು ಕಿರುತೆರೆ ನಟಿ ಅಮ್ರೀನ್ ಭಟ್ ಅವರನ್ನು ಗುಂಡಿಕ್ಕಿ ಕೊಂದಿದ್ದರು.

ಬುದ್ಗಾಮ್ ಜಿಲ್ಲೆಯ ಚದೂರ ಪ್ರದೇಶದ ಹುಶ್ರೂನಲ್ಲಿರುವ ನಿವಾಸದ ಬಳಿ ಅಮ್ರೀನ್ ಭಟ್ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದು, ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಚದೂರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು.

ಇಂದು ಶ್ರೀನಗರದ ಸೂರಾ ಪ್ರದೇಶದಲ್ಲಿ ಎನ್ಕೌಂಟರ್ ನಡೆಸಲಾಗಿದ್ದು, ಘಟನಾ ಸ್ಥಳದಲ್ಲಿ ಎಕೆ 47 ರೈಫಲ್, ಒಂದು ಪಿಸ್ತೂಲ್ ವಶಕ್ಕೆ ಪಡೆಯಲಾಗಿದೆ. ಮೂರು ದಿನಗಳಲ್ಲಿ 10 ಮಂದಿ ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸುವೆ. ಲಷ್ಕರ್ ಸಂಘಟನೆಯ 7 ಮತ್ತು ಜೈಷ್ ಸಂಘಟನೆಯ ಮೂವರು ಉಗ್ರರ ಹತ್ಯೆ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...